ಇದೇ ವೇಳೆ ಪೋಕ್ಸೋ, ಬಾಲಕಾರ್ಮಿಕ ಕಾಯ್ದೆ, ಸಂಚಾರ ನಿಯಮಗಳ ಮಹತ್ವ ಹಾಗೂ ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದರಿಂದ ಉಂಟಾಗುವ ಅಪಾಯಗಳು ಮತ್ತು ಕಾನೂನು ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾಲಕರೂ ಸಹ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಬಾರದು. ವಿದ್ಯಾರ್ಥಿಗಳು ಕಾನೂನು ಪಾಲಿಸುವ ಜವಾಬ್ದಾರಿಯುತ ನಾಗರಿಕರಾಗಿ ಸಮಾಜದಲ್ಲಿ ಉತ್ತಮ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.