ಉತ್ತಮ ಬದುಕಿಗೆ ಕೀರ್ತನೆಗಳ ಅಧ್ಯಯನ ಅಗತ್ಯ

ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಿತು. ಆನಂದ್ ಪ್ರಕಾಶ್ ಮೀನಾ, ಆರ್.ಐಶ್ವರ್ಯ, ಕುಮಾರ ಇತರರಿದ್ದರು.
ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಿತು. ಆನಂದ್ ಪ್ರಕಾಶ್ ಮೀನಾ, ಆರ್.ಐಶ್ವರ್ಯ, ಕುಮಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಉತ್ತಮ ಬದುಕಿಗೆ ಕೀರ್ತನೆಗಳ ಅಧ್ಯಯನ ಅಗತ್ಯ
  • ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಆನಂದ್ ಪ್ರಕಾಶ್ ಮೀನಾ
ಮಡಿಕೇರಿ: ಪ್ರತಿಯೊಬ್ಬರ ಉತ್ತಮ ಬದುಕಿಗೆ ಭಕ್ತ ಕನಕದಾಸರ ಕೀರ್ತನೆಗಳ ಅಧ್ಯಯನ ಅಗತ್ಯ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಕನಕದಾಸರು ಹಲವು ಕೀರ್ತನೆ ರಚಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ದಾಸ ಶ್ರೇಷ್ಠರಲ್ಲಿ ಕನಕದಾಸರು ಸಂತ ಕವಿಗಳಾಗಿದ್ದು, ತಮ್ಮ ದಾಸ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಕನಕದಾಸರು ಭಕ್ತಿ ಮಾರ್ಗದ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಕನಕದಾಸರ ಕೀರ್ತನೆಗಳು ಉಪನಿಷತ್ತು ಹಾಗೂ ಭಗವದ್ಗೀತೆಯಲ್ಲಿನ ಸಾರವನ್ನು ಒಳಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಕನಕದಾಸರ ಬದುಕೇ ಎಲ್ಲರಿಗೂ ದಾರಿದೀಪ, ಆ ನಿಟ್ಟಿನಲ್ಲಿ ಕನಕದಾಸರ ಜೀವನ ಚರಿತ್ರೆ ತಿಳಿದುಕೊಳ್ಳುವಂತಾಗಬೇಕು. ಕನ್ನಡ ನಾಡಿನಲ್ಲಿ ಹುಟ್ಟಿದ ನಾವು ದಾಸರು, ಶರಣರು, ವಚನಕಾರರ ಪರಂಪರೆ ತಿಳಿಯಬೇಕು ಎಂದು ನುಡಿದರು.
ಸರಸ್ವತಿ ಡಿಇಡಿ ಕಾಲೇಜಿನ ಪ್ರಾಂಶುಪಾಲ ಕುಮಾರ ಮಾತನಾಡಿ, ಕನಕದಾಸರು ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ, ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ಆರ್.ಪ್ರಭಾಕರ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಬಿ.ಸಿ.ಶಂಕರಯ್ಯ, ಮಣಜೂರು ಮಂಜುನಾಥ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net