ಭಾಗಮಂಡಲ ತ್ರಿವೇಣಿ ಸಂಗಮ ಮುಳುಗಡೆ

ಭಾರಿ ಮಳೆಯಿಂದಾಗಿ ಮಡಿಕೇರಿ ಸಮೀಪದ ಅಬ್ಬಿಜಲಪಾತ ಮೈತುಂಬಿಕೊoಡಿದೆ
ಭಾರಿ ಮಳೆಯಿಂದಾಗಿ ಮಡಿಕೇರಿ ಸಮೀಪದ ಅಬ್ಬಿಜಲಪಾತ ಮೈತುಂಬಿಕೊoಡಿದೆ
Published on
ಮಡಿಕೇರಿ:
ಜಿಲ್ಲೆಯಾದ್ಯಂತ ಮಳೆಯ ವಾತಾವರಣ ಮುಂದುವರಿದಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಆಗಾಗ್ಗೆ ಜೋರಾದ ಮಳೆ ಬೀಳುತ್ತಿತ್ತು. ನಗರದ ತುಂಬಾ ಮಂಜು ಕವಿದಿತ್ತು. ಕಳೆದ 2 ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಆಗಿತ್ತು. ಭಾಗಮಂಡಲ ಮತ್ತು ತಲಕಾವೇರಿ ಭಾಗದಲ್ಲೂ ಉತ್ತಮ ಮಳೆಯಾಗಿದೆ. ತ್ರಿವೇಣಿ ಸಂಗಮ ಮುಳುಗಡೆ ಆಗಿದೆ. ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಕಾವೇರಿ ನದಿ ಪಾತ್ರದಲ್ಲಿರುವ ಹೊಳೆಕೆರೆಯಲ್ಲಿ ಕರಡಿಗೋಡು ಚಿಕ್ಕನಳ್ಳಿ ಸಂಪರ್ಕ ರಸ್ತೆ ಕಡಿತಗೊಂಡಿದೆ. ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚು ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯ ನೀರಿನ ಮಟ್ಟ ಕಳೆದ ಎರಡು ದಿನಗಳಿಂದ ಏರಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಿಗೆಯಲ್ಲಿನ ಕಾವೇರಿ- ಹಾರಂಗಿ ನದಿಗಳ ಸಂಗಮ ಸ್ಧಳದಿಂದ ಕಾವೇರಿ ನದಿಯ ನೀರು ಹೆಚ್ಚಾಗಿ ಹಾರಂಗಿ ನದಿಯ ಹಿಂಬದಿಗೆ ತಳಲ್ಪಟ್ಟಿದೆ.
ಉತ್ತಮ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಜಲಪಾತಗಳು ಮೈತುಂಬಿಕೊಳ್ಳಲಾರAಭಿಸಿವೆ. ಮಡಿಕೇರಿಯ ಅಬ್ಬಿಫಾಲ್ಸ್, ಸೋಮವಾರಪೇಟೆಯ ಮಲ್ಲಳ್ಳಿ ಜಲಪಾತ, ಪೊನ್ನಂಪೇಟೆ ತಾಲೂಕಿನ ಇರ್ಪು ಜಲಪಾತಗಳಲ್ಲಿ ಹೆಚ್ಚಿನ ನೀರು ಧುಮ್ಮಿಕ್ಕುತ್ತಿದೆ. ಪೊನ್ನಂಪೇಟೆ ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 185 ಮಿಮೀ ಮಳೆ ದಾಖಲಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 60.45 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 19.29 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 631.54 ಮಿ.ಮೀ, ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1617.95 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ 87.75 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ 50.08 ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ 93.47 ಮಿ.ಮೀ.,
ಸೋಮವಾರಪೇಟೆ ತಾಲೂಕಿನಲ್ಲಿ 56.25 ಮಿ.ಮೀ. ಹಾಗೂ ಕುಶಾಲನಗರ ತಾಲೂಕಿನಲ್ಲಿ 14.70 ಮಿ.ಮೀ. ಸರಾಸರಿ ಮಳೆಯಾಗಿದೆ.
ಮಡಿಕೇರಿ 52, ನಾಪೋಕ್ಲು 59.80, ಸಂಪಾಜೆ 72, ಭಾಗಮಂಡಲ 167.20, ವಿರಾಜಪೇಟೆ 56.60, ಅಮ್ಮತ್ತಿ 45, ಹುದಿಕೇರಿ 83, ಶ್ರೀಮಂಗಲ 48.80, ಪೊನ್ನಂಪೇಟೆ 185, ಬಾಳೆಲೆ 57.09, ಸೋಮವಾರಪೇಟೆ 44, ಶನಿವಾರಸಂತೆ 43, ಶಾಂತಳ್ಳಿ 83, ಕೊಡ್ಲಿಪೇಟೆ 55, ಕುಶಾಲನಗರ 10.40 ಹಗೂ ಸುಂಟಿಕೊಪ್ಪ ಹೋಬಳಿಯಲ್ಲಿ 19 ಮಿ.ಮೀ.ಮಳೆಯಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net