ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದವನ ಬಂಧನ

ಬಾಲಕಿಗೆ ಲೈಂಗಿಕ ಕಿರುಕುಳ
ಬಾಲಕಿಗೆ ಲೈಂಗಿಕ ಕಿರುಕುಳ
Published on

ಸುಂಟಿಕೊಪ್ಪ: ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ತೋರಿಸಿ ಬಾಲಕಿಗೆ ಲೈಂಗಿಕ ಕಿರುಕುನೀಡಿದ್ದ ಸಮೀಪದ ನಾಕೂರು ನಿವಾಸಿ ಆಟೋ ಚಾಲಕ ಪ್ರವೀಣ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 29ರಂದು ಸಂಜೆ ಶಾಲೆಯಿಂದ ಮನೆ ಹಿಂದಿರುಗುತ್ತಿದ್ದ ಬಾಲಕಿಯನ್ನು ಪ್ರವೀಣ್ ತನ್ನ ಮೊಬೈಲ್‌ನಲ್ಲಿ ವಿಡಿಯೋ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆಂದು ಬಾಲಕಿಯ ಪಾಲಕರು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆತನ ಬೆದರಿಕೆಯಿಂದ ಭಯಗೊಂಡಿದ್ದ ಬಾಲಕಿ ಆರಂಭದಲ್ಲಿ ತನಗಾದ ದೌರ್ಜನ್ಯದ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿರಲಿಲ್ಲ. ನಂತರ ತಾಯಿಗೆ ಬಾಲಕಿ ವಿಷಯ ತಿಳಿಸಿದ ಪರಿಣಾಮ ಆ.3ರಂದು ಬಾಲಕಿಯ ತಾಯಿ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net