ಶ್ರೀ ವ್ಯಾಸಪೂಜೆ ಮತ್ತು ಪರಮಪೂಜ್ಯ ಭಕ್ತರಾಜ ಮಹಾರಾಜರ ಪ್ರತಿಮಾ ಪೂಜೆ, ಸಚ್ಚಿದಾನಂದ ಪರಬ್ರಹ್ಮ ಡಾ.ಆಠವಲೆ ಅವರ ಸಂದೇಶ ವಾಚನ, ರಾಮರಾಜ್ಯದ ಸ್ಥಾಪನೆಗಾಗಿ ಸಂಕಲ್ಪ ಮತ್ತು ನಾಮಜಪ, ಧರ್ಮರಕ್ಷಕರು ಹಾಗೂ ಹಿಂದುತ್ವನಿಷ್ಠರ ಸತ್ಕಾರ, ರಾಷ್ಟ್ರಭಕ್ತ ಮತ್ತು ಧರ್ಮನಿಷ್ಠ ಗಣ್ಯರ ಮಾರ್ಗದರ್ಶನ, ಸ್ವರಕ್ಷಣೆಯ ಸುಲಭ ಪದ್ಧತಿಗಳ ಪ್ರತ್ಯಕ್ಷ ಪ್ರದರ್ಶನ ಹಾಗೂ ಸಮಿತಿಯ ಪ್ರೇರಣಾಸ್ಥಾನ ಸಚ್ಚಿದಾನಂದ ಪರಬ್ರಹ್ಮ ಡಾ.ಆಠವಲೆ ಅವರ ಕಾರ್ಯವನ್ನಾಧರಿಸಿದ ಕಿರುಚಿತ್ರ ಇದೇ ವೇಳೆ ಪ್ರದರ್ಶಿಸಲಾಯಿತು. ವಿವಿಧ ವಿಷಯಗಳ ಮೇಲಿನ ಗ್ರಂಥ-ಪ್ರದರ್ಶನ ಹಾಗೂ ರಾಷ್ಟ್ರ-ಧರ್ಮ ವಿಷಯದ ಫಲಕ ಪ್ರದರ್ಶನ ಏರ್ಪಡಿಸಲಾಗಿತ್ತು.