ಸರ್ಕಾರದ ಸವಲತ್ತು ಬಳಸಿಕೊಳ್ಳಿ

 ಕುಶಾಲನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕುಶಾಲನಗರ ತಾಲೂಕು ಸೌಂದರ್ಯವರ್ಧಕರ ವಾರ್ಷಿಕೋತ್ಸವ ಮತ್ತು ಮಹಾಸಭೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಉದ್ಘಾಟಿಸಿದರು. ಶಾಂತಾ ಶ್ರೀಪತಿ, ಜೆ .ಫಿಲೋಮಿನಾ, ವನಿತಾ ಚಂದ್ರಮೋಹನ್, ಡೆಸಿಲ್ಲಾ ಇತರರು ಇದ್ದರು.
ಕುಶಾಲನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕುಶಾಲನಗರ ತಾಲೂಕು ಸೌಂದರ್ಯವರ್ಧಕರ ವಾರ್ಷಿಕೋತ್ಸವ ಮತ್ತು ಮಹಾಸಭೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಉದ್ಘಾಟಿಸಿದರು. ಶಾಂತಾ ಶ್ರೀಪತಿ, ಜೆ .ಫಿಲೋಮಿನಾ, ವನಿತಾ ಚಂದ್ರಮೋಹನ್, ಡೆಸಿಲ್ಲಾ ಇತರರು ಇದ್ದರು.
Published on
ಕುಶಾಲನಗರ: ಸೌಂದರ್ಯವರ್ಧಕ ವೃತ್ತಿ ನಿರತರು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವುದರ ಮೂಲಕ ಅವರ ವಿಶ್ವಾಸವನ್ನು ಗಳಿಸುವುದಲ್ಲದೆ ಸಂಘಟಿತ ಪ್ರಯತ್ನದ ಮೂಲಕ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಹೇಳಿದರು.
ಕುಶಾಲನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕುಶಾಲನಗರ ತಾಲೂಕು ಸೌಂದರ್ಯವರ್ಧಕರ ವಾರ್ಷಿಕೋತ್ಸವ ಮತ್ತು ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕುಶಾಲನಗರ ಶಾರದಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶಾಂತಾ ಶ್ರೀಪತಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲತೆಯನ್ನು ಹೊಂದಬೇಕೆಂದು ಕರೆ ನೀಡಿದರು.
ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಅಧ್ಯಕ್ಷೆ ಜೆ.ಫಿಲೋಮಿನಾ ಮಾತನಾಡಿ, ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತಾಗಬೇಕೆಂದು ಹೇಳಿದರು.
ಸನ್ಮಾನ: ಆಶಾ ಕಾರ್ಯಕರ್ತೆಯರಾದ ಗೀತಾ ಮತ್ತು ಆಶಾ ಅವರನ್ನು ಹಾಗೂ ಅತಿಥಿ ಮತ್ತು ಆಡಳಿತ ಮಂಡಳಿಯ ಪ್ರಮುಖರನ್ನು ಸಂಘದ ವತಿಯಿಂದ ಇದೇ ವೇಳೆ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷೆ ಎನ್.ನಾಗಮಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷೆ ವನಿತಾ ಚಂದ್ರಮೋಹನ್, ಉಪಾಧ್ಯಕ್ಷೆ ಡೆಸಿಲ್ಲಾ, ಪ್ರಧಾನ ಕಾರ್ಯದರ್ಶಿ ನವ್ಯಾ, ಕಾರ್ಯದರ್ಶಿ ಮಧುಶ್ರೀ ಲೋಕೇಶ್, ಸಂಘಟನಾ ಕಾರ್ಯದರ್ಶಿ ತಾಜ್, ಖಜಾಂಚಿ ಚೈತನ್ಯ ಸಿ.ಮೋಹನ್ ಮತ್ತು ಪದಾಧಿಕಾರಿಗಳು ಹಾಗೂ ಇತರ ಸದಸ್ಯರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net