ಬಾಲ, ಕಿಶೋರ ಕಾರ್ಮಿಕರ ರಕ್ಷಣೆಗೆ ಮುಂದಾಗಿ

ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಕಲಿಕಾ ಸಾಮಗ್ರಿಗಳನ್ನು ಎಸ್.ಜೆ.ಸೋಮಶೇಖರ್ ವಿತರಿಸಿದರು. ಎಂ.ಎಂ.ಯತ್ನಟ್ಟಿ, ಶಶಿಧರ, ಎಂ.ಸಿ.ಮಾದಪ್ಪ ಇತರರಿದ್ದರು.
ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಕಲಿಕಾ ಸಾಮಗ್ರಿಗಳನ್ನು ಎಸ್.ಜೆ.ಸೋಮಶೇಖರ್ ವಿತರಿಸಿದರು. ಎಂ.ಎಂ.ಯತ್ನಟ್ಟಿ, ಶಶಿಧರ, ಎಂ.ಸಿ.ಮಾದಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಾಲ, ಕಿಶೋರ ಕಾರ್ಮಿಕರ ರಕ್ಷಣೆಗೆ ಮುಂದಾಗಿ
ಮಡಿಕೇರಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಚಟುವಟಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸೂಚಿಸಿದರು.
ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು. ಪತ್ತೆಯಾದ ಬಾಲ/ ಕಿಶೋರ ಕಾರ್ಮಿಕರಿಗೆ ಅರ್ಹತೆ ಅನುಸಾರ ಸರ್ಕಾರಿ ಬಾಲಮಂದಿರ ವಸತಿ ನಿಲಯಗಳಲ್ಲಿ ನೇರವಾಗಿ ದಾಖಲಿಸಲು ಕ್ರಮವಹಿಸಬೇಕು ಎಂದು ಸಲಹೆ ಮಾಡಿದರು.
ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿ, ಗ್ರಾಮ ಸಭೆಗಳಲ್ಲಿ ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಬಗ್ಗೆ ಬೆಳಕು ಚೆಲ್ಲುವಂತಾಗಬೇಕು. ಬಾಲ ಕಾರ್ಮಿಕರ ಮತ್ತು ಕಿಶೋರ ಕಾರ್ಮಿಕರು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅರಿವು ಮೂಡಿಸುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮ ತಲುಪಿಸುವಂತೆ ನಿರ್ದೇಶನ ನೀಡಿದರು. ಈ ಸಂಬಂಧ ಇಬ್ಬರಿಗೆ ಕಲಿಕಾ ಸಾಮಗ್ರಿಗಳನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ವಿತರಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ, ತಾಲ್ಲೂಕು ಕಾರ್ಮಿಕ ಅಧಿಕಾರಿಗಳಾದ ಎಂ.ಎಂ.ಯತ್ನಟ್ಟಿ, ಶಶಿಧರ, ಎಂ.ಸಿ.ಮಾದಪ್ಪ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಶಿರಾಜ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನಕುಮಾರ್ ಇತರರು ಹಲವು ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net