ಶನಿವಾರಸಂತೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಿ.ಕೆ.ಚಿಣ್ಣಪ್ಪ, ಜಗನ್‌ಪಾಲ್, ಮಹಮದ್‌ಪಾಷ, ಎನ್.ಕೆ.ಅಪ್ಪಸ್ವಾಮಿ, ಚಿಣ್ಣಪ್ಪ, ಆನಂದ್, ಕೇಶವಮೂರ್ತಿ, ದೇವರಾಜ್, ಎಸ್.ಜಿ.ಅಶೋಕ್, ನರಸಿಂಹಮೂರ್ತಿ ಇದ್ದರು.

Published on
ಶನಿವಾರಸಂತೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಭಾರತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿದ್ಯಾಸಂಸ್ಥೆ ಹಿರಿಯ ನಿರ್ದೇಶಕ ಬಿ.ಕೆ.ಚಿಣ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ನಿರಂತರವಾಗಿ ಓದಿ ಉತ್ತಮ ಅಂಕಗಳಿಸಿ ತೇರ್ಗಡೆಯಾಗುವುದರ ಮೂಲಕ ಕೊಡಗು ಜಿಲ್ಲೆಗೆ ಕೀರ್ತಿ ತಂದುಕೊಟ್ಟಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಜಗನ್‌ಪಾಲ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮಹಮದ್‌ಪಾಷ, ಕಾರ್ಯದರ್ಶಿ ಎನ್.ಕೆ.ಅಪ್ಪಸ್ವಾಮಿ, ನಿರ್ದೇಶಕರಾದ ಚಿಣ್ಣಪ್ಪ, ಆನಂದ್, ಕೇಶವಮೂರ್ತಿ, ದೇವರಾಜ್ ಪ.ಪೂ.ಕಾಲೇಜು ಪ್ರಾಂಶುಪಾಲ ಎಸ್.ಜಿ.ಅಶೋಕ್, ಪ್ರೌಢಶಾಲಾ ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net