ಸ್ವಯಂ ಸೇವಕರ ನಿಯೋಜನೆ ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ಸಂವಹನ ಮತ್ತು ಸಂಪರ್ಕಕ್ಕೆ ಸದಾ ಸಿದ್ಧವಿರಬೇಕು. ಅಗ್ನಿಶಾಮಕ, ಲೋಕೋಪಯೋಗಿ, ಪಂಚಾಯತ್ ರಾಜ್, ಕಂದಾಯ, ಅರಣ್ಯ ಹೀಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಮರ ಬಿದ್ದ ಸಂದರ್ಭದಲ್ಲಿ ತೆರವುಗೊಳಿಸುವುದು, ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡುವುದು, ಹೆಚ್ಚಿನ ಗಾಳಿ-ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರವಹಿಸಬೇಕು ಎಂದರು.