ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಬರುವ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ರಾಮಬಾಣ. ವಿದ್ಯಾರ್ಥಿಗಳು ಶಿಸ್ತು ಬದ್ಧತೆಯಿಂದ ಕಲಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಉಪನ್ಯಾಸಕರಾದ ಸುನಿತಾ ಗಿರೀಶ್, ಈಶಾ, ಕವಿತಾ ಇದ್ದರು.