ಮುಂದಿನ ಪೀಳಿಗೆಗೆ ನೀರಿನ ಮಹತ್ವ ತಿಳಿಸಿ

ವಿರಾಜಪೇಟೆಯಲ್ಲಿ ಶಾಸಕ ಪೊನ್ನಣ್ಣ ಕುಡಿಯುವ ನೀರಿನ ಟ್ಯಾಂಕರ್‌ಗೆ ಚಾಲನೆ ನೀಡಿದರು. ಪಟ್ಟಡ ರಂಜಿ ಪೂಣಚ್ಚ, ನಯನಾ,  ದೇಚಮ್ಮ ಕಾಳಪ್ಪ ಇತರರಿದ್ದರು.
ವಿರಾಜಪೇಟೆಯಲ್ಲಿ ಶಾಸಕ ಪೊನ್ನಣ್ಣ ಕುಡಿಯುವ ನೀರಿನ ಟ್ಯಾಂಕರ್‌ಗೆ ಚಾಲನೆ ನೀಡಿದರು. ಪಟ್ಟಡ ರಂಜಿ ಪೂಣಚ್ಚ, ನಯನಾ, ದೇಚಮ್ಮ ಕಾಳಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೇಸಿಗೆ ಸಮಯ
  • ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದೆಂಬ ಉದ್ದೇಶ
ವಿರಾಜಪೇಟೆ: ಬೇಸಿಗೆ ಸಮಯದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದೆಂಬ ಉದ್ದೇಶದಿಂದ ಶಾಸಕ ಎ.ಎಸ್.ಪೊನ್ನಣ್ಣ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.
ವಿರಾಜಪೇಟೆ ವ್ಯಾಪ್ತಿಯಲ್ಲಿ ಅಗತ್ಯ ಇರುವ ಸಾರ್ವಜನಿಕರಿಗೆ ತುರ್ತು ನೀರಿನ ಸೌಲಭ್ಯ ಕಲ್ಪಿಸಲು 28 ಲಕ್ಷ ರೂ. ವೆಚ್ಚದಲ್ಲಿ ಶಾಸಕರು ಟ್ಯಾಂಕರ್ ವಾಹನ ವ್ಯವಸ್ಥೆ ಮಾಡಿದ್ದಾರೆ.
ಪಟ್ಟಣದಲ್ಲಿರುವ ತಮ್ಮ ಗೃಹ ಕಚೇರಿ ಎದುರು ಕುಡಿಯವ ನೀರಿನ ಟ್ಯಾಂಕರ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ತೀವ್ರ ಬೇಸಿಗೆಯಿಂದ ಕ್ಷೇತ್ರದಲ್ಲಿ ನೀರಿನ ಅಭಾವ ತಲೆದೋರಿದ್ದು, ಸಾರ್ವಜನಿಕರಿಗೆ ನೀರಿನ ಅಭಾವ ಆಗದಂತೆ ಎಚ್ಚರವಹಿಸಿ ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ತಮ್ಮ ಅಗತ್ಯಕ್ಕೆ ಅನುಸಾರವಾಗಿ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜೀವ ಜಲವನ್ನು ಸಂರಕ್ಷಿಸಿ ನಮ್ಮ ಮುಂದಿನ ಪೀಳಿಗೆಗೆ ನೀರಿನ ಅಗತ್ಯದ ಬಗ್ಗೆ ಮಾಹಿತಿ ನೀಡಬೇಕೆಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡರಂಜಿ ಪೂಣಚ್ಚ, ಮಹಿಳಾ ಘಟಕದ ಅಧ್ಯಕ್ಷೆ ನಯನಾ, ಪುರಾಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net