ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಬಿಡಲಿ

ವಿರಾಜಪೇಟೆಲ್ಲಿ ಬ್ಲ್ಯಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಎ.ಎಸ್.ಪೊನ್ನಣ್ಣ, ರಂಜಿ ಪೂಣಚ್ಚ, ರಾಜೇಶ್ ಪದ್ಮನಾಭ, ನಯನಾ, ರಮೇಶ್ ಇದ್ದರು.
ವಿರಾಜಪೇಟೆಲ್ಲಿ ಬ್ಲ್ಯಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಎ.ಎಸ್.ಪೊನ್ನಣ್ಣ, ರಂಜಿ ಪೂಣಚ್ಚ, ರಾಜೇಶ್ ಪದ್ಮನಾಭ, ನಯನಾ, ರಮೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹೇಳಿಕೆ
ವಿರಾಜಪೇಟೆ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಬೆಂಬಲಸಿ ಹಾಗೂ ಕೇಂದ್ರ ಬಿಜೆಪಿ ನಾಯಕತ್ವ ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ವಿರಾಜಪೇಟೆ ಬ್ಲ್ಯಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಗಡಿಯಾರ ಕಂಬದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್, ವಿರಾಜಪೇಟೆ ಪ್ರಚಾರ ಸಮಿತಿ, ವಿರಾಜಪೇಟೆ ಯುವ ಕಾಂಗ್ರೆಸ್ ಮತ್ತು ಎಲ್ಲ ಘಟಕಗಳ ಸಹಯೋಗದಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ನೇತೃತ್ವದಲ್ಲಿ ಹೋರಾಟ ರೂಪಿಸಲಾಗಿತ್ತು.
ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿರುವುದು ಖಂಡನೀಯ. ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಉಗ್ರಗಾಮಿಗಳು ಎಂದು ಬಣ್ಣಿಸುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದೊಡ್ಡ ದುರಂತ. ವಿದ್ಯಾರ್ಥಿಗಳು ಮತ್ತು ದೇಶಕ್ಕೆ ಇದಕ್ಕಿಂತ ದೊಡ್ಡ ಅನ್ಯಾಯ ಇನ್ನೊಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಮಾರು ಒಂದು ಗಂಟೆ ಕಾಲ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಂತಿಮವಾಗಿ ಪ್ರತಿಭಟನೆ ಅಂತ್ಯಗೊಳಿಸಿದರು. ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಹಿಳಾ ಘಟಕದ ಅಧ್ಯಕ್ಷೆ ನಯನಾ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಮತೀನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net