ಕೊಡವ ಜನಾಂಗದ ಆಚಾರ-ವಿಚಾರ ವಿಭಿನ್ನ

 ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಆಟ್‌ಪಾಟ್ ಶಿಬಿರದ ಸಮಾರೋಪ ಸಮಾರಂಭವನ್ನು ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟಿಸಿದರು. ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕುಲ್ಲೇಟಿರ ಅಜಿತ್ ನಾಣಯ್ಯ, ಕರವಂಡ ಲವ ನಾಣಯ್ಯ, ಚೌರಿರ ಉದಯ ಇತರರಿದ್ದರು.
ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಆಟ್‌ಪಾಟ್ ಶಿಬಿರದ ಸಮಾರೋಪ ಸಮಾರಂಭವನ್ನು ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟಿಸಿದರು. ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕುಲ್ಲೇಟಿರ ಅಜಿತ್ ನಾಣಯ್ಯ, ಕರವಂಡ ಲವ ನಾಣಯ್ಯ, ಚೌರಿರ ಉದಯ ಇತರರಿದ್ದರು.
Published on
ನಾಪೋಕ್ಲು: ಕೊಡವ ಜನಾಂಗದ ಆಚಾರ, ವಿಚಾರ, ಪದ್ಧತಿ, ಪರಂಪರೆ, ಸಂಸ್ಕೃತಿ ವಿಭಿನ್ನವಾಗಿದ್ದು ಆಟ್‌ಪಾಟ್ ಶಿಬಿರಗಳ ಮೂಲಕ ಯುವ ಜನಾಂಗ ಅದನ್ನು ಮತ್ತಷ್ಟು ಎತ್ತರಕ್ಕೆ ಕೊಂಡ್ಯೊಯ್ಯುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಹೇಳಿದರು.
ಇಲ್ಲಿನ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಆಟ್‌ಪಾಟ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೊಡವ ಜನಾಂಗದ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳು ವಿಭಿನ್ನವಾಗಿದೆ. ಎಲ್ಲ ಸಮುದಾಯದವರು ಮೆಚ್ಚುವಂತಹ ಸಂಸ್ಕೃತಿಯಾಗಿದೆ. ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೊಡವ ಜನಾಂಗ ಸಮುದಾಯಕ್ಕೆ ಉತ್ತಮವಾದುದನ್ನು ಬಯಸಬೇಕು. ಭಾಷೆ, ಸಂಸ್ಕೃತಿಯನ್ನು ಮೂಲೆಗುಂಪು ಮಾಡಬಾರದು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಮಾತನಾಡಿ, ಕೊಡವ ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವಂತಹ ಕೆಲಸವನ್ನು ಮಾಡಬೇಕಿದೆ. ದೇಶದಲ್ಲಿ ಕೊಡವ ಜನಾಂಗಕ್ಕೆ ಉತ್ತಮ ಹೆಸರಿದೆ. ಕಲೆ, ಸಂಸ್ಕೃತಿಗೆ ದೇಶದ ಯಾವ ಮೂಲೆಯಲ್ಲಾದದರೂ ಉತ್ತಮ ಗೌರವ ಲಭಿಸುತ್ತದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಮಾತನಾಡಿ, ಜೇನಂಡ ಹಾಕಿ ಕಪ್ ಪಂದ್ಯಾವಳಿಯಲ್ಲಿ ಆಟ್‌ಪಾಟ್ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೊಡವ ಸಮಾಜದ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಶಿಬಿರವನ್ನು ವ್ಯವಸ್ಥಿತವಾಗಿ ಆಯೋಜಿಸಲಾಯಿತು.
ತರಬೇತುದಾರರಾದ ಚೇನಂಡ ಮಧುಮಾಚಯ್ಯ, ಬೋಪಣ್ಣ ಬೊಳ್ಳಮ್ಮ ನಾಣಯ್ಯ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ತರಬೇತುದಾರರನ್ನು ಕೊಡವ ಸಮಾಜದಿಂದ ಸನ್ಮಾನಿಸಲಾಯಿತು.
ಕೊಡವ ಸಮಾಜ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಖಜಾಂಚಿ ಚೌರಿರ ಉದಯ, ತರಬೇತುದಾರರಾದ ಚೀಯಕ ಪೂವಂಡಡ ದೇವಯ್ಯ, ಪಾಡೇಯಂಡ ಕಟ್ಟಿ ಕುಶಾಲಪ್ಪ, ಕೊಡವ ಸಮಾಜದ ಹಾಗೂ ಪೊಮ್ಮಕ್ಕಡ ಪರಿಷತ್ತಿನ ನಿರ್ದೇಶಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net