ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಕಾಡಿಗೆ ಮರಳಿಸಿತು
ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಕಾಡಿಗೆ ಮರಳಿಸಿತು
Published on

ಪ್ರಮುಖ ಮುಖ್ಯಾಂಶಗಳು

  • ಪಟಾಕಿ ಸಿಡಿಸಿ ಕಾಡಾನೆಗಳನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶದತ್ತ ಓಡಿಸುವಲ್ಲಿ ಯಶಸ್ವಿ
ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಶುಕ್ರವಾರ ಯಶಸ್ವಿಯಾಗಿ ಕಾಡಿಗೆ ಮರಳಿಸಿತು.
ಅರಣ್ಯ ಪ್ರದೇಶದಿಂದ ಹೊರಬಂದು ಗ್ರಾಮದ ಸುತ್ತಮುತ್ತಲಿನ ತೋಟಗಳತ್ತ 2 ಮರಿ ಆನೆ ಸೇರಿದಂತೆ 9 ಕಾಡಾನೆಗಳ ಹಿಂಡು ಚಲಿಸುತ್ತಿದ್ದವು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು. ಮಾಹಿತಿ ತಿಳಿದು ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಸಿಬ್ಬಂದಿ ಪಟಾಕಿಗಳನ್ನು ಸಿಡಿಸಿ ಕಾಡಾನೆಗಳನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶದತ್ತ ಓಡಿಸುವಲ್ಲಿ ಯಶಸ್ವಿಯಾದರು.
ಕಾಡಾನೆಗಳ ಹಿಂಡು ಗ್ರಾಮ ಪ್ರದೇಶದಿಂದ ದೂರ ಸರಿದ ಹಿನ್ನೆಲೆಯಲ್ಲಿ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಚೆನ್ನಂಗಿ ಸೆಕ್ಷನ್‌ನ ಉಪವಲಯ ಅರಣ್ಯಾಧಿಕಾರಿ ಪಿ.ಟಿ.ಶಶಿ ನೇತೃತ್ವದಲ್ಲಿ ಆರ್‌ಆರ್‌ಟಿ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net