ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಭವಿಷ್ಯವೇ ಕತ್ತಲು

ಮೂರ್ನಾಡಿನ ಪದವಿ ಕಾಲೇಜಿನಲ್ಲಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಡಿಕೇರಿ ಗ್ರಾಮಾಂತರ ಠಾಣೆ ಸಬ್ ಇನ್‌ಸ್ಪೆಕ್ಟರ್ ಚಂದ್ರಶೇಖರ್, ಕಲ್ಪನಾ ಸಾಮ್ರಾಟ್, ವಿಲ್ಮಾ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಡಿಕೇರಿ ಗ್ರಾಮಾಂತರ ಠಾಣೆ ಸಬ್ ಇನ್‌ಸ್ಪೆಕ್ಟರ್ ಚಂದ್ರಶೇಖರ್ ಹೇಳಿಕೆ
ನಾಪೋಕ್ಲು: ಮೂರ್ನಾಡಿನ ಪದವಿ ಕಾಲೇಜಿನಲ್ಲಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಗುರುವಾರ ಉಪನ್ಯಾಸ ಏರ್ಪಡಿಸಲಾಗಿತ್ತು.
ಮಡಿಕೇರಿ ಗ್ರಾಮಾಂತರ ಠಾಣೆ ಸಬ್ ಇನ್‌ಸ್ಪೆಕ್ಟರ್ ಚಂದ್ರಶೇಖರ್ ಮಾತನಾಡಿ, ಮಾದಕ ವಸ್ತುಗಳನ್ನು ಬಳಸುವುದು ಹಾಗೂ ಮಾರುವುದು ಶಿಕ್ಷಾರ್ಹ ಅಪರಾಧ. ವಿದ್ಯಾರ್ಥಿಗಳು ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸಿದರೆ ಭವಿಷ್ಯವೇ ಕತ್ತಲಾಗುತ್ತದೆ ಎಂದರು.
ಸೈಬರ್ ವಂಚನೆ ಹಾಗೂ ಮೊಬೈಲ್ ಕಳೆದು ಹೋದಲ್ಲಿ ಅದನ್ನು ಪತ್ತೆಹಚ್ಚಲು ಕೈಗೊಳ್ಳಬೇಕಾದ ಕ್ರಮ ಹಾಗೂ ಸಂಚಾರಿ ನಿಯಮದ ಬಗ್ಗೆ ಎಲ್ಲ ಅಂಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪೊಲೀಸ್ ವ್ಯವಸ್ಥೆಯ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು ಉತ್ತರಿಸಿದವರಿಗೆ ಪೊಲೀಸ್ ಇಲಾಖೆಯಿಂದ ಬಹುಮಾನ ವಿತರಿಸಲಾಯಿತು.
ಮೂರ್ನಾಡಿನ ಪದವಿ ಕಾಲೇಜು ಪ್ರಾಂಶುಪಾಲ ಕಲ್ಪನಾ ಸಾಮ್ರಾಟ್, ಕಾಲೇಜಿನ ಮಾದಕ ದ್ರವ್ಯ ನಿಷೇಧ ದಳದ ಅಧಿಕಾರಿ ವಿಲ್ಮಾ, ಉಪನ್ಯಾಸಕರು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net