ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಭಾರತೀಯ ಕಾನೂನು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಭಾರತದ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ಪ್ರಾಚೀನ, ಆದಿಮ ಸಂಜಾತ, ಏಕ-ಜನಾಂಗೀಯ, ಪ್ರಕೃತಿ ಆರಾಧಕ ಕೊಡವ ಧಾರ್ಮಿಕ ಸಂಸ್ಕಾರವಾದ ಕೋವಿ-ತೋಕ್ ಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.