ಜಿಲ್ಲಾಧಿಕಾರಿ ಭೇಟಿ ಮಾಡಿದ ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟ
ಕೊಡಗು ಜಿಲ್ಲೆಯ ಅರೆಸೇನಾ ಪಡೆಯ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರನ್ನು ಭೇಟಿ ಮಾಡಿ ಸ್ವಾಗತಿಸಲಾಯಿತು. ಪುಲಿಯಂಡ ಎಂ.ಚAಗಪ್ಪ, ಹರೀಶ್ ಕುಮಾರ್, ಜಿ.ಕೆ. ದಿನೇಶ್ ಕುಮಾರ್, ಬಿ.ಯು.ಲೋಕೇಶ್, ಎನ್.ಎಂ. ಭೀಮಯ್ಯ ಹಾಗೂ ಡಿ.ಎಸ್. ನಳಿನಿ ಕುಮಾರಿ ಇದ್ದರು.
Published on:
Copied
Follow Us
ಮಡಿಕೇರಿ:
ಕೊಡಗು ಜಿಲ್ಲೆಯ ಅರೆಸೇನಾ ಪಡೆಯ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಮಂಗಳವಾರ ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರನ್ನು ಭೇಟಿ ಮಾಡಿ ಸ್ವಾಗತಿಸಲಾಯಿತು. ಯೋಧರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಬಳಿ ಚರ್ಚಿಸಿ ಸೂಕ್ತ ಪರಿಹಾರಕ್ಕೆ ಕೋರಲಾಯಿತು.
ಕೊಡಗು ಜಿಲ್ಲೆಯಲ್ಲಿ ಹಾಲಿ ಕರ್ತವ್ಯದಲ್ಲಿ ಇರುವ ಮತ್ತು ನಿವೃತ್ತಿ ಹೊಂದಿರುವ ಯೋಧರ ಸಂಖ್ಯೆ ಸುಮಾರು 5 ಸಾವಿರದಷ್ಟಿದ್ದು, ಇದೂವರೆಗೂ ಯೋಧರ ಹಿತರಕ್ಷಣೆಗಾಗಿ ಸ್ವಂತದ್ದಾದ ಸಂಘದ ಜಾಗವನ್ನು ಕೂಡ ಹೊಂದಲು ಸಾಧ್ಯವಾಗಿಲ್ಲ. ಮಡಿಕೇರಿಯ ಮಹದೇವಪೇಟೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಚೇರಿ ತೆರೆದು ಕಾರ್ಯನಿರ್ವಹಿಸಲಾಗುತ್ತಿದೆ. ಈಗಾಗಲೇ ಮೃತ ಯೋಧರ ಪತ್ನಿಯರು ಹಾಗೂ ಕುಟುಂಬ ಸದಸ್ಯರ ಸಂಕಷ್ಟಗಳಿಗೆ ನೆರವಾಗುವ ಮೂಲಕ ಆ ಕುಟುಂಬಗಳಿಗೆ ಸರ್ಕಾರದ ಸವಲತ್ತುಗಳ ಮಾಹಿತಿ ನೀಡಲಾಗುತ್ತಿದೆ. ಹಾಗಾಗಿ ಕುಶಾಲನಗರದ ಪುರಸಭಾ ವ್ಯಾಪ್ತಿಯ ಮುಳ್ಳುಸೋಗೆಯಲ್ಲಿ ಈಗಾಗಲೇ 60 ಸೆಂಟ್‌ಗÀಳಷ್ಟು ಸರ್ಕಾರಿ ಜಾಗ ಗುರುತಿಸಿದ್ದು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಕುಶಾಲನಗರಕ್ಕೆ ಆಗಮಿಸಿ ಖುದ್ದಾಗಿ ಸ್ಥಳ ಪರಿಶೀಲಿಸಿ ನಮಗೆ ಆ ಭೂಮಿಯನ್ನು ಮಂಜೂರಾತಿ ಮಾಡಿಕೊಡಬೇಕೆಂದು ಸಂಘದ ವತಿಯಿಂದ ಜಿಲ್ಲಾಧಿಕಾರಿಯವರಲ್ಲಿ ಕೋರಲಾಯಿತು.
ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಪುಲಿಯಂಡ ಎಂ.ಚAಗಪ್ಪ, ನಿರ್ದೇಶಕರಾದ ಹರೀಶ್ ಕುಮಾರ್, ಜಿ.ಕೆ. ದಿನೇಶ್ ಕುಮಾರ್, ಬಿ.ಯು.ಲೋಕೇಶ್, ಎನ್.ಎಂ. ಭೀಮಯ್ಯ ಹಾಗೂ ಡಿ.ಎಸ್. ನಳಿನಿ ಕುಮಾರಿ ಇದ್ದರು.