ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು

ಸಮಾಜ ಕಲ್ಯಾಣ ಇಲಾಖೆಯ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಮಹತ್ವ ಸಾರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಮಹತ್ವ ಸಾರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Published on
ಮಡಿಕೇರಿ:
ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ಅಧ್ಯಕ್ಷ ಪಿ.ಎಂ. ರವಿ ಮೊಗೇರ ಹೇಳಿದರು. 80ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ಉತ್ತೇಜಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ನಡೆದ ಬ್ಯಾಡ್ಜ್ ವಿತರಣೆ ಮತ್ತು ಸ್ವಾತಂತ್ರ‍್ಯ ದಿನಾಚರಣೆಯ ಮಹತ್ವ ಸಾರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಷ್ಟ್ರಕ್ಕೆ ದ್ರೋಹ ಬಗೆಯುವ ಅಥವಾ ಅಪಮಾನ ಮಾಡುವವರನ್ನು ಖಂಡಿಸುವ ಮತ್ತು ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಅಂತಹ ವಿಚಾರಗಳಲ್ಲಿ ವಿದ್ಯಾರ್ಥಿಗಳು ಮುಂಚೂಣಿಯಲ್ಲಿರಬೇಕು. ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸಬೇಕು. 80ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಎಲ್ಲರೂ ಪಾಲ್ಗೊಂಡು ರಾಷ್ಟ್ರಕ್ಕೆ ಗೌರವ ಸೂಚಿಸಬೇಕು. ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡುವಂತೆ ಮಾಡಿ, ರಾಷ್ಟ್ರದ ಬಗ್ಗೆ ನಮ್ಮ ಗೌರವವನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಇದೇ ಸಂದರ್ಭ ಬ್ಯಾಡ್ಜ್ಗಳನ್ನು ವಿತರಿಸಲಾಯಿತು.
ಮಡಿಕೇರಿ ಬಿಜೆಪಿ ಎಸ್.ಸಿ. ಮೋರ್ಚಾದ ನಗರ ಮಂಡಲ ಅಧ್ಯಕ್ಷ ಮುಕುಂದ, ಮಾಧ್ಯಮ ಪ್ರಮುಖರಾದ ಅಪ್ಪು ಮಹೇಶ್ ಹಾಗೂ ವಸತಿ ನಿಲಯದ ಸಿಬ್ಬಂದಿ ಮಂಜುನಾಥ್, ರೀಟಾ, ವಿನೋದ್ ಹಾಗೂ ಹರ್ಷಿತ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net