ಈ ಬಾರಿಯ ಮಾನವೀಯತೆಯಲ್ಲಿ ಏಕತೆ ಎಂಬ ವಿಚಾರ ಕುರಿತು ಕಾಲೇಜಿನ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸೇಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಆರೋಗ್ಯ ಜಾಗೃತಿ ಮೂಡಿಸುವುದು ರೆಡ್‌ಕ್ರಾಸ್‌ನ ಪ್ರಮುಖ ಉದ್ದೇಶವಾಗಿದ್ದು, ಆರೋಗ್ಯವಂತ ಸಮಾಜ ನಿರ್ಮಿಸಲು ಸ್ವಯಂ ಸೇವಕರ ಪಾತ್ರ ಅಪಾರವಾಗಿದೆ ಎಂದರು. ತುರ್ತು ಸಂದರ್ಭದಲ್ಲಿ ದೇಶಾದ್ಯಂತ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು.