ಉತ್ಪಾದನಾ ಕ್ಷೇತ್ರದಲ್ಲಿ ಕಾರ್ಮಿಕರ ಪಾತ್ರ ಅಪಾರ

ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ವಿರಾಜಪೇಟೆ ಪಟ್ಟಣದಲ್ಲಿ ಎಐಸಿಸಿಟಿಯು ವತಿಯಿಂದ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಎಂ.ಕೆ. ಮೋಹನ್, ಗೌರಿ, ಕ್ಲಿಪ್ಟನ್ ರೋಜರಿಯೋ ಇತರರಿದ್ದರು.
ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ವಿರಾಜಪೇಟೆ ಪಟ್ಟಣದಲ್ಲಿ ಎಐಸಿಸಿಟಿಯು ವತಿಯಿಂದ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಎಂ.ಕೆ. ಮೋಹನ್, ಗೌರಿ, ಕ್ಲಿಪ್ಟನ್ ರೋಜರಿಯೋ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕ್ಲಿಪ್ಟನ್ ರೋಜರಿಯೋ ಅಭಿಪ್ರಾಯ
ವಿರಾಜಪೇಟೆ: ಉತ್ಪಾದನಾ ಕ್ಷೇತ್ರದಲ್ಲಿ ಕಾರ್ಮಿಕರ ಪಾತ್ರ ಅಪಾರವಾಗಿದೆ ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಪ್ಟನ್ ರೋಜರಿಯೋ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಎಐಸಿಸಿಟಿಯು ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಮಿಕರಿಲ್ಲದೆ ಯಾವುದೇ ವಸ್ತುವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಕಾಫಿ ತೋಟ, ಕೃಷಿ ಕ್ಷೇತ್ರ, ಕಾರ್ಖಾನೆಗಳಲ್ಲಿ ಉತ್ಪಾದನೆಯಾಗುವ ಪ್ರತಿ ವಸ್ತುವೂ ಕಾರ್ಮಿಕರಿಂದಲೇ ತಯಾರಿಸಲಾಗುತ್ತದೆ ಎಂದರು.
ಪ್ರಸ್ತುತ ಕೇಂದ್ರ ಸರ್ಕಾರವು ಜಾರಿಗೆ ತಂದ ಹೊಸ ಕೋಡ್‌ಗಳನ್ನು ಹಿಂಪಡೆಯಬೇಕು. ಲೈನ್ ಮನೆಗಳಲ್ಲಿ ವಾಸವಿರುವ ಎಲ್ಲ ಕಾರ್ಮಿಕರಿಗೂ ಸ್ವಂತ ಮನೆಗಳನ್ನು ನಿರ್ಮಿಸಿ ಕೊಡಬೇಕು. ಜತೆಗೆ ಕಾರ್ಮಿಕರಿಗೆ ನ್ಯಾಯಯುತ ಸಂಬಳ ನೀಡಬೇಕು. ಸರ್ಕಾರಗಳು ಕಾರ್ಮಿಕರ ಪರವಾಗಿ ನೀತಿಗಳನ್ನು ರೂಪಿಸಲಿ ಎಂದು ಆಗ್ರಹಿಸಿದರು.
ಎಐಸಿಸಿಟಿಯು ಮಂಗಳೂರು ಘಟಕದ ಜಿಲ್ಲಾಧ್ಯಕ್ಷ ರಮಣ ವಿಠಲ ಮಾತನಾಡಿ, ಪ್ರಸ್ತುತ ಭೂಮಿ ಪಡೆಯಲು ಕಾರ್ಮಿಕರು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಜೀತಪದ್ಧತಿಯ ವಿರುದ್ಧ ಹೋರಾಟ ಮಾಡಿ ನಿರ್ಮೂಲನೆ ಮಾಡಬೇಕಿದೆ. ಕೊಡಗಿನಲ್ಲಿ ಎಲ್ಲ ಕಾರ್ಮಿಕರಿಗೆ ಕನಿಷ್ಠ ಐದು ಎಕರೆ ಭೂಮಿ ನೀಡಬೇಕು ಎಂದು ಆಗ್ರಹಿಸಿದರು.
ಎಐಸಿಟಿಯು ಜಿಲ್ಲಾಧ್ಯಕ್ಷ ಎಂ.ಕೆ.ಮೋಹನ್, ವಿರಾಜಪೇಟೆ ತಾಲೂಕು ಆದಿವಾಸಿ ಸಂಘದ ಕಾರ್ಯದರ್ಶಿ ಗೌರಿ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ವಿರಾಜಪೇಟೆ ಪಟ್ಟಣದಲ್ಲಿ ಮೆರವಣಿಗೆ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net