ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಪ್ರಾಂಶುಪಾಲೆ ಡಾ.ಕೆ.ಜಿ.ವೀಣಾ, ರಾಘವೇಂದ್ರ, ಸೋಮಣ್ಣ, ಅಕ್ಷಿತಾ, ಬೋಜಮ್ಮ, ಸೋಮನಾಥ್ ಇದ್ದರು.
Published on:
Copied
Follow Us
ವಿರಾಜಪೇಟೆ :
ಹಿರಿಯರು, ಹೋರಾಟಗಾರರ ಬಲಿದಾನದ ಫಲವೇ ಸ್ವಾತಂತ್ರ್ಯ. ಆದ್ದರಿಂದ ಹೋರಾಟಗಾರರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಎಂ.ಕೆ.ಪದ್ಮಾ ಅಭಿಪ್ರಾಯಪಟ್ಟರು.
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಪದವಿ ಹಾಗೂ ಪದವಿ ಪೂರ್ವ ವಿಭಾಗದಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವಿಂದು ಉತ್ತಮ ಜೀವನ ನಡೆಸಲು ಅಸಂಖ್ಯಾತ ದೇಶಭಕ್ತರ ನಿಸ್ವಾರ್ಥ ಸೇವೆ, ತ್ಯಾಗ, ಬಲಿದಾನವೇ ಕಾರಣ ಎಂದರು.
ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಜಿ.ವೀಣಾ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ವಿಭಾಗದಲ್ಲಿ ಭಾಷಣ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪದವಿ ವಿಭಾಗದ ಐಕ್ಯೂಎಸಿ ಸಂಯೋಜಕ ಎಲ್.ಆರ್.ರಾಘವೇಂದ್ರ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಮುಖ್ಯಸ್ಥ ಸೋಮಣ್ಣ, ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಬೋಜಮ್ಮ, ಎನ್‌ಎಸ್‌ಎಸ್ ಅಧಿಕಾರಿ ಸುನೀಲ್ ಕುಮಾರ್, ಅಧೀಕ್ಷಕ ಸೋಮನಾಥ್, ಪದವಿ ಪೂರ್ವ ವಿಭಾಗದ ಉಪಪ್ರಾಂಶುಪಾಲೆ ದಮಯಂತಿ, ಎನ್‌ಎಸ್‌ಎಸ್ ಅಧಿಕಾರಿ ಅನುಪಮಾ ಉಪನ್ಯಾಸಕರಾದ ಗಾಯತ್ರಿ, ಅಕ್ಷಿತಾ ನಾಯ್ಕ, ಡಯಾನ ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.