ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಹಸಿ ಸುಳ್ಳು

ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್‌ಗೌಡ
ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್‌ಗೌಡ
Published on

ಪ್ರಮುಖ ಮುಖ್ಯಾಂಶಗಳು

  • ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್
  • ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್‌ಗೌಡ
ಸೋಮವಾರಪೇಟೆ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಕಳೆದ 2 ವರ್ಷಗಳಿಂದ ಸುಮಾರು 1724 ಕೋಟಿ ರೂ. ಅನುದಾನ ತರಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಅವರ ಹೇಳಿಕೆ ಹಸಿ ಸುಳ್ಳು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್‌ಗೌಡ ಕಿಡಿಕಾರಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಂದಿನ ಶಾಸಕರಾದ ಅಪ್ಪಚ್ಚು ರಂಜನ್ ಅವರ ಶ್ರಮದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿಗಳು ನಡೆದಿದ್ದು, ಇದನ್ನು ಇಂದಿನ ಶಾಸಕರು ತಂದ ಅನುದಾನವಾಗಿದೆ ಎಂದು ಹೇಳಿರುವುದು ಹಾಸ್ಯಾಸ್ಪದ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
1724 ಕೋಟಿ ರೂ. ಕೋಟಿ ರೂ. ಅನುದಾನದಲ್ಲಿ 653 ಕೋಟಿ ರೂ. ಅನುದಾನ ಬಿಜೆಪಿ ಸರ್ಕಾರವಿದ್ದಾಗ ಮಂಜೂರಾಗಿದೆ. ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ತಾವೇ ತಂದಿದ್ದು ಎಂದು ಕಾಂಗ್ರೆಸ್‌ನವರು ಭೂಮಿಪೂಜೆ ನೆರವೇರಿಸಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಯುವಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಅನುದಾನವಿಲ್ಲದೆ ಅಭಿವೃದ್ಧಿ ಕೆಲಸ ಸಾಧ್ಯವಾಗುತ್ತಿಲ್ಲ ಎಂದು ಸ್ವಪಕ್ಷ ಶಾಸಕರು ಸರ್ಕಾರದ ವಿರುದ್ಧವೇ ಹೋರಾಟಕ್ಕೆ ಇಳಿದಿದ್ದಾರೆ. ಇಂತಹ ಸಂಕಷ್ಟದ ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಶ್ವೇತಪತ್ರ ಹೊರಡಿಸುವಂತೆ ಕೇಳಿದರೆ ಅನುದಾನದ ವಿವರವನ್ನು ಬಿಳಿಹಾಳೆಯಲ್ಲಿ ಟೈಪ್ ಮಾಡಿಸಿ ಮಾಜಿ ಸಚಿವರಾದ ಅಪ್ಪಚ್ಚು ರಂಜನ್ ಅವರಿಗೆ ಕಳುಹಿಸಿದ್ದಾರೆ. ಹಾಗಾಗಿ ಬ್ಲಾಕ್ ಅಧ್ಯಕ್ಷರು ಶ್ವೇತಪತ್ರ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಮಂಡಲ ಪದಾಧಿಕಾರಿಗಳಾದ ಎಸ್.ಆರ್.ಸೋಮೇಶ್, ದರ್ಶನ್ ಜೋಯಪ್ಪ, ಮೋಕ್ಷಿತ್ ಸುದ್ದಿಗೋಷ್ಠಿಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net