

ರೈತರು ರಸಗೊಬ್ಬರ ಪಡೆಯಲು ಎಫ್‌ಐಡಿ ಕಡ್ಡಾಯವಾಗಿ ಹೊಂದಿರಬೇಕು. ಈಗಾಗಲೇ ಮಾಡಿಸಿಕೊಂಡಿದ್ದರೆ ಸರಿ, ಇಲ್ಲದಿದ್ದರೆ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಮಾಡಿಸಿಕೊಳ್ಳಬೇಕು. ರೈತರ ಎಲ್ಲ ಭೂಮಿಯ ಪಹಣಿಯನ್ನು ಸಹ ಎಫ್‌ಐಡಿಗೆ ಜೋಡಿಸುವುದು ಕಡ್ಡಾಯ. ಇದರ ಆಧಾರದಲ್ಲೇ ರಸಗೊಬ್ಬರವನ್ನು ಕೆ. ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುವ ರಸಗೊಬ್ಬರ ವಿತರಣೆಯಾಗಿರುವ ದೃಢೀಕರಣವನ್ನಾಧರಿಸಿ ರಾಜ್ಯಕ್ಕೆ ಹಂತಹAತವಾಗಿ ರಸಗೊಬ್ಬರ ವಿತರಣೆ ಮಾಡಲಾಗುತ್ತದೆ. ಹೀಗಾಗಿ, ರಾಜ್ಯ ಸರ್ಕಾರ ಎಫ್‌ಐಡಿ ಕಡ್ಡಾಯ ಮಾಡಿ ಆದೇಶ ನೀಡಿದೆ.