ಶಾಲೆಯಲ್ಲಿ ಟ್ಯಾಬ್‌ಗಳ ಕಳ್ಳತನ

ನಾಪೋಕ್ಲು ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು.
ನಾಪೋಕ್ಲು ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು.
Published on
ನಾಪೋಕ್ಲು: ಇಲ್ಲಿನ ಕೆಪಿಎಸ್ ಪ್ರಾಥಮಿಕ ಶಾಲೆಯ ಆರು ಟ್ಯಾಬ್‌ಗಳು, ಒಂದು ಲ್ಯಾಪ್‌ಟಾಪ್ ಕಳ್ಳತನವಾಗಿರುವ ಬಗ್ಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಾಲೆಯ ಅಧ್ಯಾಪಕರ ಕೊಠಡಿ ಹಿಂಬದಿಯಿಂದ ಕಿಟಕಿಯ ಗಾಜು ಒಡೆದು ನುಗ್ಗಿರುವ ಕಳ್ಳರು ಕಳ್ಳತನ ಮಾಡಿದ್ದಾರೆ. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ನಳಿನಿ ಬುಧವಾರ ಶಾಲೆಗೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net