ಗಾಂಜಾ ಸೇವನೆ ಮಾಡುತ್ತಿದ್ದ ಮೂವರ ಬಂಧನ

ಬೇತು ಗ್ರಾಮದ ಕೂಡು ರಸ್ತೆಯಲ್ಲಿ ಪೊಲೀಸರಿಂದ ಕಾರ್ಯಾಚರಣೆ
ಬೇತು ಗ್ರಾಮದ ಕೂಡು ರಸ್ತೆಯಲ್ಲಿ ಪೊಲೀಸರಿಂದ ಕಾರ್ಯಾಚರಣೆ
Published on
ನಾಪೋಕ್ಲು: ಗಾಂಜಾ ಸೇವನೆ ಮಾಡುತ್ತಿದ್ದ ಹೊರರಾಜ್ಯದ ಮೂವರು ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ರಾಜ್ಯದ ಧಾರಾಂಗ್ ಜಿಲ್ಲೆಯ ನೂರ್‌ಮೊಹಮ್ಮದ್(25) ಸಾಧಿಕ್ ಆಲಿ(35) ಸೈದುಲ್ ರಹಮಾನ್(27) ಬಂಧಿತರು.
ಸಮೀಪದ ಬೇತು ಗ್ರಾಮದ ಕೂಡು ರಸ್ತೆಯಲ್ಲಿ ಮತ್ತು ಎಮ್ಮೆಮಾಡು, ಕೂರುಳಿ ಸಂಪರ್ಕಿಸುವ ರಸ್ತೆಯಲ್ಲಿರುವ ಪ್ರಯಾಣಿಕರ ತಂಗುದಾಣದ ಸಮೀಪ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ಕಾರ್ಯಾಚರಣೆ ನಡೆಸಿದರು.
ನಂತರ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೂವರು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದ್ಯರು ದೃಢಪ ಡಿಸಿರುವುದರಿಂದ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net