ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

crime
crime
Published on
ಸಿದ್ದಾಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಗೂಡುಗದ್ದೆ ಗ್ರಾಮದ ಧನುಷ್ (23), ಕರಡಿಗೋಡು ಗ್ರಾಮದ ಗೌತಮ್ (19), ನೆಲ್ಯಹುದಿಕೇರಿ ಗ್ರಾಮದ ಅನ್ಸಾದ್ (23) ಬಂಧಿತರು. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೆಲ್ಯಹುದಿಕೇರಿ ಗ್ರಾಮದ ಕಾವೇರಿ ನದಿಯ ಹಳೆ ಸೇತುವೆಯಿಂದ ಕುಂಬಾರಗುಂಡಿಗೆ ತೆರಳುವ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 10.30 ಗಂಟೆಗೆ ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆ ಎಎಸ್‌ಐ ಎಚ್.ಕೆ.ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿತು.
ಈ ವೇಳೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಸುಮಾರು 612 ಗ್ರಾಂ ಗಾಂಜಾ, ನಗದು, ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡರು. ಕಾರ್ಯಾಚರಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ರಾಜೇಶ್, ಸಿಬ್ಬಂದಿ ಮಣಿಕಂಠ, ನಿರಂಜ, ಯೋಗೇಶ್, ಪ್ರವೀಣ್ ಭಾಗವಹಿಸಿದ್ದರು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net