

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ಚಂಗಪ್ಪ ಅವರ ಕಾಫಿ ತೋಟದ ಸುತ್ತಮುತ್ತ ಹುಲಿ ಸಂಚಾರ ಮಾಡುತ್ತಿರುವ ಸುಳಿವು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಚಂಗಪ್ಪ ಅವರ ಕಾಫಿ ತೋಟದಲ್ಲಿ ಸೋಮವಾರ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಾಲ್ದಾರೆ ಹಾಗೂ ಸುತ್ತಮುತ್ತಲ ಪ್ರದೇಶದ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ. ಕಾಫಿ ತೋಟಗಳಿಗೆ ಒಂಟಿಯಾಗಿ ತೆರಳದಂತೆ ಹಾಗೂ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸಬಾರದು ಎಂದು ಸೂಚಿಸಲಾಗಿದೆ. ಹುಲಿ ಕಂಡುಬಂದಲ್ಲಿ ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.