ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ

ತಿತಿಮತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಬು ಕಾಡು ಪೈಸಾರಿಯಲ್ಲಿ ಕಾಡಾನೆ ಹಾವಳಿ ತಡೆಗೆ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಶನಿವಾರ ಚಾಲನೆ ನೀಡಿದರು. ಧರ್ಮಜ ಉತ್ತಪ್ಪ, ನವೀನ್, ಟಾಟು ಮೊಣ್ಣಪ್ಪ ಇತರರಿದ್ದರು.
ತಿತಿಮತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಬು ಕಾಡು ಪೈಸಾರಿಯಲ್ಲಿ ಕಾಡಾನೆ ಹಾವಳಿ ತಡೆಗೆ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಶನಿವಾರ ಚಾಲನೆ ನೀಡಿದರು. ಧರ್ಮಜ ಉತ್ತಪ್ಪ, ನವೀನ್, ಟಾಟು ಮೊಣ್ಣಪ್ಪ ಇತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಗೋಣಿಕೊಪ್ಪ
ತಿತಿಮತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಬು ಕಾಡು ಪೈಸಾರಿಯಿಂದ 7 ಕಿಲೋ ಮೀಟರ್
ವ್ಯಾಪ್ತಿಯ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿಗೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಶನಿವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ ಬ್ಯಾರಿಕೇಡ್ ನಿರ್ಮಾಣಕ್ಕಾಗಿ ರೂ.20 ಕೋಟಿ ರೂ. ಮೀಸಲಿರಿಸಿದೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಬಂಬುಕಾಡು ಪೈಸಾರಿಯಿಂದ ಕಿಸಾನ್ ತೋಟದ ಮೂಲೆಯ ತನಕ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯಕ್ರಮ ಇದಾಗಿದೆ ಎಂದು ಮಾಹಿತಿ ನೀಡಿದರು.
ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ವೈಜ್ಞಾನಿಕ ಯೋಜನೆಗಳನ್ನು ರೂಪಿಸುತ್ತಿದೆ. ಸ್ಥಳೀಯರನ್ನು ನಿರಂತರವಾಗಿ ಕಾಡುತ್ತಿರುವ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪರಿಹಾರ ಮಾರ್ಗವನ್ನು ಅಳವಡಿಸಲು ಜನರು ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರೀರ ನವೀನ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು, ವಲಯ ಅಧ್ಯಕ್ಷ ನವೀನ್, ಮಾಯಮುಡಿ ಪಂಚಾಯಿತಿ ಅಧ್ಯಕ್ಷರೂ ಆಗಿರುವ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಟಾಟು ಮೊಣ್ಣಪ್ಪ, ಜಿಲ್ಲಾ ಗ್ಯಾರಂಟಿ ಯೋಜನಾ ಉಪಾಧ್ಯಕ್ಷೆ ಪಂಕಜ, ಪಕ್ಷದ ಮುಖಂಡರು ಅಜ್ಜಿಕುಟ್ಟಿರ ಗಿರೀಶ್, ಅರಣ್ಯ ಅಧಿಕಾರಿಗಳು, ಐಟಿಡಿಪಿ ಇಲಾಖೆಯ ಅಧಿಕಾರಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net