ಪ್ರವಾಸಿಗರಿಂದ ಸ್ಥಳೀಯರಿಗೆ ತೊಂದರೆ

ನರಿಯಂದಡ ಗ್ರಾಪಂ ವ್ಯಾಪ್ತಿಯ ಚೇಲಾವರ ಜಲಪಾತ ಹಾಗೂ ಕಬ್ಬೆ ಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಚರ್ಚೆಯಾಯಿತು. ಪಿಡಿಒ ಆಶಾ ಕುಮಾರಿ, ಗ್ರಾಮದ ಪ್ರಮುಖರಾದ ವಿನೋದ್ ನಾಣಯ್ಯ, ದಿಲೀಪ್, ಅಧಿಕಾರಿಗಳು ಇದ್ದರು.
ನರಿಯಂದಡ ಗ್ರಾಪಂ ವ್ಯಾಪ್ತಿಯ ಚೇಲಾವರ ಜಲಪಾತ ಹಾಗೂ ಕಬ್ಬೆ ಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಚರ್ಚೆಯಾಯಿತು. ಪಿಡಿಒ ಆಶಾ ಕುಮಾರಿ, ಗ್ರಾಮದ ಪ್ರಮುಖರಾದ ವಿನೋದ್ ನಾಣಯ್ಯ, ದಿಲೀಪ್, ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Tourists causing trouble
ನಾಪೋಕ್ಲು: ಸಮೀಪದ ನರಿಯಂದಡ ಗ್ರಾಪಂ ವ್ಯಾಪ್ತಿಯ ಚೇಲಾವರ ಜಲಪಾತ ಹಾಗೂ ಕಬ್ಬೆಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಚೇಲಾವರದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು.
ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನರಿಯಂದಡ ಗ್ರಾಪಂ ಪಿಡಿಒ ಆಶಾ ಕುಮಾರಿ ಅಧ್ಯಕ್ಷತೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಜರುಗಿತು.
ವಿರಾಜಪೇಟೆ ವಲಯದ ಅರಣ್ಯಧಿಕಾರಿ ಶಿವರಾಮ್ ಮಾತನಾಡಿ, ಐದಾರು ವರ್ಷಗಳ ಹಿಂದೆ ಪ್ರವಾಸಿಗರಿಗೆ ಎಪಿಸಿ ಕ್ಯಾಂಪ್ ಮೂಲಕ ಟಿಕೆಟ್ ವಿತರಿಸಿ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಕಂದಾಯ ಇಲಾಖೆ ಹಾಗೂ ಗ್ರಾಮಸ್ಥರ ವಿರೋಧದ ನಡುವೆ ಎಪಿಸಿ ಕ್ಯಾಂಪ್ ರದ್ದುಪಡಿಸಲಾಗಿದ್ದು, ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ತಹಸೀಲ್ದಾರ್ ಗಮನಕ್ಕೆ ತರಲಾಗುವುದು ಎಂದರು.
ಗ್ರಾಪಂ ಮಾಜಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಮಾತನಾಡಿ, ಊರಿನ ಅಭಿವೃದ್ಧಿಗೆ ಗ್ರಾಮಸ್ಥರೆಲ್ಲರೂ ಕೈ ಜೋಡಿಸಬೇಕು. ಇಲ್ಲಿನ ಬೆಟ್ಟ ಹಾಗೂ ಜಲಪಾತದ ರಕ್ಷಣೆ ಆಗಬೇಕು ಎಂದರು. ಪ್ರವಾಸಿಗರ ನಿಯಂತ್ರಣಕ್ಕೆ ಚೆಯ್ಯಂಡಾಣೆಯಲ್ಲಿ ಗೇಟ್ ಆಳವಡಿಸಿ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಸಭೆಯಲ್ಲಿ ಒತ್ತಾಯಿಸಿದರು.
ನಾಪೋಕ್ಲು ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಫ್ರಾನ್ಸಿಸ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರ ವಾಹನಗಳನ್ನು ಗ್ರಾಮಸ್ಥರು ಹಾನಿ ಪಡಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಗ್ರಾಮಸ್ಥರು ತಮಗೆ ಯಾವುದೇ ತೊಂದರೆಗಳಾದಲ್ಲಿ ಇಲಾಖೆಯ ಗಮನಕ್ಕೆ ತಂದರೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಪಿಡಿಒ ಆಶಾ ಕುಮಾರಿ ಮಾತನಾಡಿ, ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮಸ್ಥರಾದ ನಡಿಕೇರಿಯಂಡ ದಿಲೀಪ್, ಗ್ರಾಪಂ ಮಾಜಿ ಸದಸ್ಯ ಪ್ರವೀಣ್, ಈರಪ್ಪ, ಪವನ್, ಪಟ್ಟಚೆರುವಂಡ ಪ್ರತಾಪ್, ವಿಶು, ಸುರೇಶ್, ಪ್ರಗತಿಪರ ಕೃಷಿಕ ನಂದ ಕುಮಾರ್, ಲೋಕೇಶ್, ದೇವಿ ಪ್ರಸಾದ್ ಮತ್ತಿತರರು ಮಾತನಾಡಿದರು.
ಗ್ರಾಪಂ ಮಾಜಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ವಿರಾಜಪೇಟೆ ಅರಣ್ಯ ಇಲಾಖೆಯ ಶ್ರೀನಿವಾಸ್, ನಾಪೋಕ್ಲು ಪೊಲೀಸ್ ಠಾಣೆಯ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net