ಅರಣ್ಯ ಇಲಾಖೆ, ಯಡವನಾಡು ಗ್ರಾಮದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆಯ ಸಾಲುಮರ ತಿಮ್ಮಕ್ಕ ಇಕೋ ಕ್ಲಬ್ ಸಹಯೋಗದಲ್ಲಿ ವಸತಿ ಶಾಲಾ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಎಂ.ಬಿ.ಮಲ್ಲೇಶ್ ಉದ್ಘಾಟಿಸಿದರು. ನಂತರ ಮಾತನಾಡಿ, ಪರಿಸರ ಮತ್ತು ಜೀವಿಗಳಿಗೆ ಅವಿನಾಭಾವ ಸಂಬಂಧ ಇದ್ದು, ವಿದ್ಯಾರ್ಥಿ ಜೀವನದಿಂದಲೇ ಪರಿಸರ ರಕ್ಷಣೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ವಸತಿ ಶಾಲೆಯ ಮುಖ್ಯ ಶಿಕ್ಷಕ ರಜನಿಕಾಂತ್, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು, ಹುದುಗೂರಿನ ಉಪ ವಲಯ ಅರಣ್ಯಾಧಿಕಾರಿ ವಿ.ಎಸ್.ಮಂಜೇಗೌಡ ಮತ್ತು ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.