ಸಮಾಜ ಸೇವೆಗೆ ಮುಂದಾಗಿ

ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಆಯೋಜಿಸಿದ್ದ, ರಾಷ್ಟ್ರೀಯ ಸೇವಾ ಯೋಜನಾ ಘಟಕದ  ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳು ಸ್ವಚ್ಛತೆ ಮಾಡಿದರು.
ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳು ಸ್ವಚ್ಛತೆ ಮಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಉಪನ್ಯಾಸಕಿ ಪ್ರತಿಮಾ ಹರೀಶ ರೈ ಕಿವಿಮಾತು
ನಾಪೋಕ್ಲು: ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರ್ಕಾರಿ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ವಾರ್ಷಿಕ ವಿಶೇಷ ಶಿಬಿರವು 7 ದಿನಗಳ ಕಾಲ ನಡೆಯಿತು.
ಸೇಂಟ್ ಆನ್ಸ್ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಪ್ರತಿಮಾ ಹರೀಶ ರೈ ಮಾತನಾಡಿ, ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಯಬೇಕು. ಸಾಲುಮರದ ತಿಮ್ಮಕ್ಕ ಮತ್ತು ಅರೆಕಳ ಹಾಜಬ್ಬ ರೀತಿ ನೀವು ಕೂಡ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಾಕತ್ತೂರು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಟಿ.ಬಿ.ಕುಮಾರಸ್ವಾಮಿ ಮಾತನಾಡಿ, ಮಕ್ಕಳಲ್ಲಿ ವಿಚಾರವಂತಿಕೆ, ನೀತಿವಂತಿಕೆ ಇರುವ ವಿದ್ಯೆಯು ಗಳಿಕೆಯಾಗಬೇಕು. ತಮ್ಮ ನಿಸ್ವಾರ್ಥ ಸೇವೆಯು ಸಮಾಜಕ್ಕೆ ಸಲ್ಲಿಕೆಯಾಗಬೇಕು ಎಂಬುವುದನ್ನು ವಿದ್ಯಾರ್ಥಿಗಳಲ್ಲಿ ಮನವರಿಕೆ ಮಾಡಿದರು.
ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಚ್.ಪಿ ನಿರ್ಮಲಾ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವು ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ, ಸರಳತೆ, ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು.
ಶಿಬಿರಾರ್ಥಿಗಳು ಶಾಲಾ ವಠಾರ, ರಸ್ತೆಗಳಲ್ಲಿ ಕಸಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಿದರು. ಶಿಬಿರಾಧಿಕಾರಿ ಡಾ.ವೇಣುಗೋಪಾಲ, ಸಹ ಯೋಜನಾಧಿಕಾರಿ ರಾಕಿ ಪೊನ್ನಣ್ಣ, ಶಿಬಿರದ ನಾಯಕಿ ಆಶಿತಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net