ಕಂಬಿಬಾಣೆ ವೃತ್ತದಿಂದ ಊರುಗುಪ್ಪೆ ಪೈಸಾರಿಯು 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿದ್ದು, ಈ ಗ್ರಾಮದ ರಸ್ತೆ 8 ಅಡಿ ಅಗಲ ಇದೆ. ಹೀಗಾಗಿ ಈ ಭಾಗದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಗಂಭೀರ ಸಮಸ್ಯೆ ಬಗ್ಗೆ ಸಂಬಂಧಿಸಿದ ಇಲಾಖೆ ಮೇಲಧಿಕಾರಿಗಳು, ಜನಪ್ರತಿನಿಧಿಗಳು ಪರಿಗಣಿಸಿ ಸಮಸ್ಯೆ ಪರಿಹಾರಕ್ಕೆ ರಸ್ತೆ ವಿಸ್ತರಣೆ ಮಾಡಲು ಕ್ರಮ ವಹಿಸಬೇಕು.