29ರಂದು ಕೃಷಿ ಚಟುವಟಿಕೆ ಕುರಿತು ತರಬೇತಿ

ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ
ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ
Published on
ಸೋಮವಾರಪೇಟೆ: ರೈತರಿಗೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಕುರಿತು ತಾಂತ್ರಿಕ ಮಾಹಿತಿ ನೀಡುವ ಉದ್ದೇಶದಿಂದ ನೇರುಗಳಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜೂ.29ರಂದು ಬೆಳಗ್ಗೆ 10.30ಕ್ಕೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವೀರಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖೇತ್ ಬಚಾವೋ ಅಭಿಯಾನ, ಬೀಜೋಪಚಾರ ಆಂದೋಲನ ಹಾಗೂ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಕುರಿತಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ), ಕಾಫಿ ಬೋರ್ಡ್ ಹಾಗೂ ಸಂಬಾರ ಮಂಡಳಿಯ ವಿಜ್ಞಾನಿಗಳು ಭಾಗವಹಿಸಿ ರೈತರಿಗೆ ಮಾಹಿತಿ ನೀಡಲಿದ್ದಾರೆ.
ತರಬೇತಿ ಕಾರ್ಯಕ್ರಮದಲ್ಲಿ ಕಾಫಿ, ಕಾಳು ಮೆಣಸು, ಏಲಕ್ಕಿ, ಶುಂಠಿ, ಭತ್ತ ಹಾಗೂ ಮುಸುಕಿನ ಜೋಳ ಸೇರಿದಂತೆ ವಿವಿಧ ಬೆಳೆಗಳ ನಿರ್ವಹಣೆ, ಉತ್ಪಾದಕತೆ ಹೆಚ್ಚಳ ಹಾಗೂ ರೋಗ-ಕೀಟ ನಿಯಂತ್ರಣ ಕುರಿತು ತಾಂತ್ರಿಕ ಮಾರ್ಗದರ್ಶನ ನೀಡಲಾಗುತ್ತದೆ.
ರೈತರು ತಮ್ಮ ಬೆಳೆಗಳಲ್ಲಿ ರೋಗ ಅಥವಾ ಕೀಟದ ಸಮಸ್ಯೆಗಳಿದ್ದಲ್ಲಿ ಸಂಬಂಧಿತ ಬೆಳೆಗಳ ಮಾದರಿಗಳನ್ನು ತರಬಹುದಾಗಿದ್ದು, ವಿಜ್ಞಾನಿಗಳಿಂದ ಸ್ಥಳದಲ್ಲೇ ಸೂಕ್ತ ಸಲಹೆ ಹಾಗೂ ಪರಿಹಾರ ಪಡೆಯಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net