ಯು.ಸಿ.ಕೌಶಿಕ್ ಕುಮಾರ್ ಆಯ್ಕೆ

ಕೌಶಿಕ್‌ಕುಮಾರ್
ಕೌಶಿಕ್‌ಕುಮಾರ್
Published on

ಪ್ರಮುಖ ಮುಖ್ಯಾಂಶಗಳು

  • ಇಂಗ್ಲೆಂಡ್‌ನಲ್ಲಿ ಆಯೋಜಿಸಿರುವ ಮಿಕ್ಸ್ ಬಾಕ್ಸಿಂಗ್ ಸ್ಪರ್ಧೆ
ಸೋಮವಾರಪೇಟೆ: ಮೇ ತಿಂಗಳಿನಲ್ಲಿ ಇಂಗ್ಲೆಂಡ್‌ನಲ್ಲಿ ಆಯೋಜಿಸಿರುವ ಮಿಕ್ಸ್ ಬಾಕ್ಸಿಂಗ್ ಸ್ಪರ್ಧೆಗೆ ಸಮೀಪದ ಐಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಯು.ಸಿ.ಕೌಶಿಕ್ ಕುಮಾರ್ ಆಯ್ಕೆಯಾಗಿದ್ದು, ಭಾರತ ತಂಡವನ್ನು ಪ್ರತಿನಿಧಿಸಲಿದ್ದಾನೆ.
ಇತ್ತೀಚೆಗೆ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಏಷಿಯನ್ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದ ಕೌಶಿಕ್‌ಕುಮಾರ್, ಮೇ ತಿಂಗಳಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾನೆ. ಈತ ಗರಗಂದೂರು ಗ್ರಾಮದ ಯಂಕನ ಚಂಗಪ್ಪ ಹಾಗೂ ಆಶಾ ದಂಪತಿ ಪುತ್ರ. ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಅವರು ತರಬೇತಿ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net