ಸೀಗೆಹೊಸೂರು ಸಮೀಪದ ಜೇನುಕಲ್ಲು ಬೆಟ್ಟ ಗ್ರಾಮದಲ್ಲಿರುವ ಶ್ರೀ ಉದ್ಭವ ಕಾಡು ಬಸವಣ್ಣ ದೇವರ ವಾರ್ಷಿಕ ಪೂಜೋತ್ಸವ ಶ್ರಧ್ಧಾಭಕ್ತಿಯಿಂದ ನಡೆಯಿತು. ಹೆಚ್.ಎಂ. ನಾಗೇಶ್, ಬಸವರಾಜ್, ಟಿ.ಕೆ. ಚಂದ್ರಶೇಖರ್, ಧರ್ಮಾನಂದ್, ಕುಮಾರ್ ಮತ್ತಿತರರು ಇದ್ದರು.
Published on:
Copied
Follow Us
ಕುಶಾಲನಗರ:
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಜೇನುಕಲ್ಲು ಬೆಟ್ಟ ಗ್ರಾಮದಲ್ಲಿರುವ ಶ್ರೀ ಉದ್ಭವ ಕಾಡು ಬಸವಣ್ಣ ದೇವರ ವಾರ್ಷಿಕ ಪೂಜೋತ್ಸವ ಶ್ರಧ್ಧಾಭಕ್ತಿಯಿಂದ ಸೋಮವಾರ ನೆರವೇರಿತು. ಶ್ರೀ ಉದ್ಭವ ಕಾಡು ಬಸವಣ್ಣ ದೇವಸ್ಥಾನ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಮಹಾ ಪೂಜ್ಯೋತ್ಸದ ಅಂಗವಾಗಿ ಉದ್ಭವ ಶ್ರೀ ಬಸವಣ್ಣ ದೇವರಿಗೆ ವಿಶೇಷ ಹೋಮ ಹವನ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು, ಬೆಳಗ್ಗಿನಿಂದಲೇ ಆರಂಭಗೊAಡು ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಹಾಗೂ ಅಗಮಿಸಿದ್ದ ಭಕ್ತರಿಗೆ ಅನ್ನಸಂರ್ತಪಣೆ ಕಾರ್ಯ ಸಮಿತಿ ವತಿಯಿಂದ ನೆರವೇರಿತು.
ಬಸವ ಜಯಂತಿ ದಿನವಾಗಿರುವ ಹಿನ್ನೆಲೆಯಲ್ಲಿ ಸೀಗೆಹೊಸೂರು, ಭುವನಗಿರಿ, ಜೇನುಕಲ್ಲು ಬೆಟ್ಟ, ಕಣಿವೆ, ಹುಲುಸೆ, ಮದಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಎಂ. ನಾಗೇಶ್, ಕಾರ್ಯದರ್ಶಿ ಬಸವರಾಜ್, ಗ್ರಾಮದ ಪ್ರಮುಖರಾದ ಟಿ.ಕೆ. ಚಂದ್ರಶೇಖರ್, ಧರ್ಮಾನಂದ್, ಕುಮಾರ್, ಕೆ.ಆರ್. ಜಗದೀಶ್, ಗಣೇಶ್, ಪುಟ್ಟರಾಜ್, ಜಗದೀಶ್, ಸೇರಿದಂತೆ ಸಮಿತಿ ನಿರ್ದೇಶಕರು, ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.