ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಸಿದ್ದಾಪುರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಶನಿವಾರ ಶಾಲಾ ಸಮವಸ್ತ್ರ ವಿತರಿಸಲಾಯಿತು. ಯುನೈಟೆಡ್ ಕೊಡಗು ಸಂಘದ ಅಧ್ಯಕ್ಷ ಝಿಯಾದ್, ಪ್ರಧಾನ ಕಾರ್ಯದರ್ಶಿ ಖಲೀಲ್, ಮುಖ್ಯೋಪಾಧ್ಯಾಯ ಬಾಬು ನಾಯಕ್ ಸೇರಿದಂತೆ ಸಂಘದ ಸದಸ್ಯರು ಇದ್ದರು.

Published on
ಸಿದ್ದಾಪುರ : ಚಿಕ್ಕ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವುದೇ ದೊಡ್ಡ ಸೇವೆ ಎಂದು ಯುನೈಟೆಡ್ ಕೊಡಗು ಸಂಘದ ಅಧ್ಯಕ್ಷ ಝಿಯಾದ್ ಹೇಳಿದರು.
ಸಿದ್ದಾಪುರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಶನಿವಾರ ಶಾಲಾ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು. ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಭರವಸೆ ತುಂಬಬೇಕು. ಈ ನಿಟ್ಟಿನಲ್ಲಿ 16 ಮಂದಿ ವಿದ್ಯಾರ್ಥಿಗಳನ್ನು ಗುರುತಿಸಿ ಸಮವಸ್ತ್ರ ವಿತರಿಸಲಾಗಿದೆ ಎಂದು ಅವರು ತಿಳಿಸಿದರು. ಮುಂಬರುವ ದಿನಗಳಲ್ಲಿ ಸಂಘದ ವತಿಯಿಂದ ಇನ್ನಷ್ಟು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಖಲೀಲ್, ನಿರ್ದೇಶಕರಾದ ರಹೀಮ್, ಮೊಹಮ್ಮದ್, ವಾಸಿಂ, ಫಾಝಿಲ್, ಸಿಯಾದ್, ಉಮ್ಮರ್, ಪ್ರಭು, ಮುಸ್ತಫಾ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಬಾಬು ನಾಯಕ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net