ರೋಟರಿ ಕ್ಲಬ್ ವತಿಯಿಂದ ಸಮವಸ್ತ್ರ ವಿತರಣೆ

ಕೂಡಿಗೆಯಲ್ಲಿರುವ ಶ್ರೀ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗೂ ಶೂ ವಿತರಣೆ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡಿದ್ದರು. ಎಂ.ಬಿ. ಮೊಣ್ಣಪ್ಪ, ರುದ್ರೇಶ್ ಪಟೇಲ್, ಎಂ.ಜಿ. ಅರುಣ್, ಎಸ್.ಕೆ. ಸತೀಶ್ ಮತ್ತಿತರರು ಇದ್ದರು.

Published on
ಕುಶಾಲನಗರ:
ಕುಶಾಲನಗರ ರೋಟರಿ ಕ್ಲಬ್ ವತಿಯಿಂದ ಕೂಡಿಗೆಯಲ್ಲಿರುವ ಶ್ರೀ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಸಮವಸ್ತ್ರ ಹಾಗೂ ಶೂಗಳನ್ನು ವಿತರಣೆ ಮಾಡಲಾಯಿತು.
ಶಾಲೆಯ ವ್ಯವಸ್ಥಾಪಕ ಎಂ.ಬಿ. ಮೊಣ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ಪುಷ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕುಶಾಲನಗರ ರೋಟರಿ ಕ್ಲಬ್ ಅಧ್ಯಕ್ಷ ರುದ್ರೇಶ್ ಪಟೇಲ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಶೂಗಳನ್ನು ವಿತರಿಸಿದರು. ಸಭೆಯಲ್ಲಿ ಕುಶಾಲನಗರ ರೋಟರಿ ಕ್ಲಬ್ ಕಾರ್ಯದರ್ಶಿ ಎಂ.ಜಿ. ಅರುಣ್, ರೋಟರಿ ಕ್ಲಬ್ ನಿಕಟ ಪೂರ್ವ ಪ್ರಾಂತಪಾಲ ಎಸ್.ಕೆ. ಸತೀಶ್, ಪ್ರಾಂತಪಾಲ ಎಂ.ಡಿ. ರಂಗಸ್ವಾಮಿ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಬಾಚರಣಿಂಡ ಅಪ್ಪಣ್ಣ, ಬಿ.ವಿ. ಅರುಣ್ ಕುಮಾರ್, ಕೆ.ಎನ್. ಮಂಜುನಾಥ್, ಕೆ.ಸಿ. ದೇವಯ್ಯ, ಶಿಕ್ಷಕರಾದ ಹೇಮಮಾಲಿನಿ, ಸೋಮಯ್ಯ, ರೂಪಕಲಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net