ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಿ

ಸಂತೆ ವಿಘ್ನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಉಚಿತ ಸಮವಸ್ತ್ರ, ಶೂ-ಸಾಕ್ಸ್‌ಗಳನ್ನು ವಿತರಣೆ ಮಾಡಿದರು.
ಸಂತೆ ವಿಘ್ನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಉಚಿತ ಸಮವಸ್ತ್ರ, ಶೂ-ಸಾಕ್ಸ್‌ಗಳನ್ನು ವಿತರಣೆ ಮಾಡಿದರು.
Published on

ಶನಿವಾರಸಂತೆ:

ಸ್ಥಳೀಯ ಶ್ರೀವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯಲ್ಲಿ 2026-27ನೇ ಸಾಲಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ಮತ್ತು ಶೂ-ಸಾಕ್ಸ್ ವಿತರಿಸಲಾಯಿತು.

ಶಿಕ್ಷಕ ಕೆ.ಪಿ.ಜಯಕುಮಾರ್ ಮಾತನಾಡಿ, ಎಲ್ಲ ಶಿಕ್ಷಕರು ಒಂದು ವರ್ಷಕ್ಕೆ ಆಗುವ ಖರ್ಚು-ವೆಚ್ಚಗಳನ್ನು ಉದಾರವಾಗಿ ಭರಿಸುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ತಂದೆ-ತಾಯಿಗಳಿಗೆ ಹೊರೆಯಾಗದೆ, ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಯಾಗುವಂತೆ ಸಲಹೆ ನೀಡಿದರು.
ಮುಖ್ಯಶಿಕ್ಷಕಿ ಕೆ.ಎಸ್.ಸುಚಿತ್ರಾ ಮಾತನಾಡಿ, ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ ಎಂಬ ಗಾದೆ ಮಾತಿನಂತೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉತ್ತಮ ಸಾಧಕ ವ್ಯಕ್ತಿಗಳಾಗುವಂತೆ ಕಿವಿಮಾತು ಹೇಳಿದರು.
ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿ.ಎನ್.ಬೆಳ್ಳಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಉಚಿತವಾಗಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವ ಜತೆಗೆ ಉತ್ತಮ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ಶಿಕ್ಷಕರಾದ ಸಂದೇಶ್, ಶ್ರೀಕಲಾ, ಪ್ರಮೋದ್, ಓ.ಅಂಜಿನಪ್ಪ ಮುಂತಾದವರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net