೨ರ ಶುಕ್ರವಾರ ಬೆಳಿಗ್ಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸುವ ನಿಮಿತ್ತಾ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಪ್ರಾಯೋಜಕತ್ವದಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ಕುಶಾಲನಗರ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸೈನಿಕ ಶಾಲೆ, ಮಾಜಿ ಸೈನಿಕರ ಸಂಘ, ಛೇಂಬರ್ ಆಫ್ ಕಾಮರ್ಸ್, ಕುಶಾಲನಗರ ಸೇರಿದಂತೆ ವಿವಿಧ ಸ್ಥಳೀಯ ಸಂಘ ಸಂಸ್ಥೆಗಳ ಪಾಲ್ಗೊಳ್ಳುವಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ(ಜಿಲ್ಲಾ ಆಸ್ಪತ್ರೆ) ಮಡಿಕೇರಿ, ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರ ಮಡಿಕೇರಿ ವಾಸವಿ ಯುವಜನ ಚಾರಿಟೇಬಲ್ ಟ್ರಸ್ಟ್ ಮತ್ತು ವಾಸವಿ ಯುವಜನ ಸಂಘದ ಸಹಯೋಗದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಕನ್ನಿಕಾ ಕನ್ವೆನ್ಷನ್ ಸೆಂಟರ್, ಹೋಟೆಲ್ ಕನ್ನಿಕಾ ಇಂಟರ್ನ್ಯಾಷನಲ್ ಐಬಿ ರಸ್ತೆ ಕುಶಾಲನಗರದಲ್ಲಿ ಬೆಳಿಗ್ಗೆ ೯:೩೦ ರಿಂದ ಪ್ರಾರಂಭಗೊಂಡು ಸಂಜೆ ೪.೦೦ ಗಂಟೆಗೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು.