

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಿಗೆ ನೂತನವಾಗಿ ಜಾರಿಗೆ ಬಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಅಜೀವಿಕ್ ಮಿಷನ್ ಗ್ರಾಮೀಣ -2026 ಯೋಜನೆಯಡಿ ಜಿಲ್ಲೆಯಾದ್ಯಂತ ಆ. 15ರಿಂದ ಸೆ. 15ರ ವರೆಗೆ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ. ಜಿಲ್ಲೆಯ 102 ಗ್ರಾ.ಪಂ.ಗಳಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಈ ಜಾಬ್ ಕಾರ್ಡ್ ಮೇಳದಲ್ಲಿ ಗ್ರಾಮೀಣ ಜನರು ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು.
— ಆನಂದ್ ಪ್ರಕಾಶ್ ಮೀನಾ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿ.ಪಂ., ಕೊಡಗು