ವಚನಗಳು ವಿಶ್ವ ಸಾಹಿತ್ಯದಲ್ಲೇ ಶ್ರೇಷ್ಠ ಸಾಹಿತ್ಯ

ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡಿದ್ದರು. ಮುನೀರ್ ಅಹ್ಮದ್, ಪ್ರೊ. ಅಶೋಕ ಸಂಗಪ್ಪ ಆಲೂರ, ಕೆ.ಎಸ್. ಮೂರ್ತಿ, ಬಿ.ಆರ್. ನಾಗೇಂದ್ರ ಪ್ರಸಾದ್ ಮತ್ತಿತರರು ಇದ್ದರು.
ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡಿದ್ದರು. ಮುನೀರ್ ಅಹ್ಮದ್, ಪ್ರೊ. ಅಶೋಕ ಸಂಗಪ್ಪ ಆಲೂರ, ಕೆ.ಎಸ್. ಮೂರ್ತಿ, ಬಿ.ಆರ್. ನಾಗೇಂದ್ರ ಪ್ರಸಾದ್ ಮತ್ತಿತರರು ಇದ್ದರು.
Published on
ಕುಶಾಲನಗರ:
ವಚನಗಳು ವಿಶ್ವ ಸಾಹಿತ್ಯದಲ್ಲೇ ಶ್ರೇಷ್ಠ ಸಾಹಿತ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ಮುನೀರ್ ಅಹ್ಮದ್ ಹೇಳಿದರು. ಕುಶಾಲನಗರದ ರೈತ ಸಹಕಾರ ಭವನ ಸಭಾಂಗಣದಲ್ಲಿ ಮಂಗಳವಾರ ನಡೆದ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಯಕಕ್ಕೆ ಮಹತ್ವ ಕೊಟ್ಟು ಶರಣರು ಸಮಾಜಕ್ಕೆ ಕೊಟ್ಟ ಅತಿ ದೊಡ್ಡ ಕೊಡುಗೆ ವಚನಗಳು. ದೇಸಿ ನುಡಿಗಳಲ್ಲಿ ರಚನೆಯಾದ ವಚನಗಳು ಕನ್ನಡ ಸಾಹಿತ್ಯ ಸಮಾಜಕ್ಕೆ ಸುಲಭವಾಗಿ ದಕ್ಕುವಂತೆ ಮಾಡಿದವು. ವಚನಕಾರರು ಲೌಕಿಕ ಜೀವನದ ವಾಸ್ತವತೆ ಪರಿಚಯ ಮಾಡಿದರು. ಶರಣರ ವಿಚಾರಧಾರೆಗಳನ್ನು ಅರಗಿಸಿಕೊಳ್ಳುವ ಸ್ಥಿತಿಯಲ್ಲಿ ಅಂದಿನ ಸಮಾಜ ಇರಲಿಲ್ಲ. ಇಂದಿನ ದಿನಗಳಲ್ಲಿ ಮಕ್ಕಳಿಗೆ ವಚನಗಳ ಸಾರಾಂಶ ತಿಳಿಸಿಕೊಟ್ಟರೆ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಕೊಡಗು ವಿಶ್ವವಿದ್ಯಾಲ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಮಾತನಾಡಿ ಶಾಲಾ, ಕಾಲೇಜುಗಳಲ್ಲಿ ವಚನಗಳ ಅಧ್ಯಯನಕ್ಕೆ ಅವಕಾಶ ಕೊಡಬೇಕು. ಯುವ ಪೀಳಿಗೆ ವಚನಗಳ ಸಾರವನ್ನು ಅರಿತುಕೊಂಡು ಅನುಸರಿಸುವಂತಾಗಬೇಕು. ಶಾಲೆಗಳು ವಚನಗಳ ಪ್ರಯೋಗ ಶಾಲೆ ಶಾಲೆ ಆಗಬೇಕು. ವಚನ ಗಾನ, ವಚನ ಪಠಣ ನಡೆಯಬೇಕು. ಶರಣ ಚಿಂತನೆ ಹರಡಬೇಕು. ಶರಣ ತತ್ವಗಳ ಸಂಶೋಧನೆ ಆಗಬೇಕು. ಈ ಬಗ್ಗೆ ವಿಚಾರ ಮಂಥನ ನಡೆಯಬೇಕು. ಕೊಡಗಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ವಚನ ಸಾಹಿತ್ಯ ಜತೆ ಮಿಳಿತ ಮಾಡುವಂತೆ ಆಗಬೇಕು. ಮನೆ, ಮನಕ್ಕೆ ಶರಣರ ಚಿಂತನೆ ಪಸರಿಸಬೇಕು. ದಾಸೋಹ ಎಲ್ಲಾ ಶರಣರ ನಿರಂತರ ಜವಾಬ್ದಾರಿ ಆಗಬೇಕು ಎಂದರು.
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ ಮಾತನಾಡಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಶರಣ ಸಾಹಿತ್ಯ ಸಮ್ಮೇಳನ ಮಾಡುವ ಮೂಲಕ ಶರಣರ ಚಿಂತನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ. ಶರಣ ತತ್ವಗಳನ್ನು ಹರಡುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಮಾತನಾಡಿದರು. ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ
ಸರೋಜ ಆರಾಧ್ಯ, ತಾಲೂಕು ಅಧ್ಯಕ್ಷೆ ಬಿ.ಬಿ. ಹೇಮಲತಾ, ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಉಪನ್ಯಾಸಕ ಡಾ. ಶೀನಪ್ಪ, ಕುಶಾಲನಗರ ಎಪಿಸಿಎಂಎಸ್ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ಅಖಿಲ ಭಾರತ ವೀರಶೈವ ಸಮಾಜದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ. ಶಿವಪ್ಪ ಇದ್ದರು.
ಸಭಾಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net