ಹುಲಗುಂದ ಶಾಲೆಗೆ ಗ್ರಾಪಂ ಅಧ್ಯಕ್ಷ ಭೇಟಿ

 ಕೂಡುಮಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಹಿರಿಯ ಪ್ರಾಥಮಿಕ ಶಾಲೆಗೆ ಪಂಚಾಯಿತಿ ಅಧ್ಯಕ್ಷ ಭಾಸ್ಕರ ನಾಯಕ್ ಮತ್ತು ಕಾರ್ಯದರ್ಶಿ ಪರಮೇಶ್ವರ್ ಪರಿಶೀಲನೆ ಮಾಡಿದರು
ಕೂಡುಮಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಹಿರಿಯ ಪ್ರಾಥಮಿಕ ಶಾಲೆಗೆ ಪಂಚಾಯಿತಿ ಅಧ್ಯಕ್ಷ ಭಾಸ್ಕರ ನಾಯಕ್ ಮತ್ತು ಕಾರ್ಯದರ್ಶಿ ಪರಮೇಶ್ವರ್ ಪರಿಶೀಲನೆ ಮಾಡಿದರು
Published on
ಕುಶಾಲನಗರ: ಕುಶಾಲನಗರ ಸಮೀಪದ ಕೂಡುಮಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ ನಾಯಕ್ ಮತ್ತು ಕಾರ್ಯದರ್ಶಿ ಪರಮೇಶ್ವರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, 1963ರಲ್ಲಿ ಶಾಲಾ ಕಟ್ಟಡ ನಿರ್ಮಾಣವಾಗಿದ್ದು ಬಹುತೇಕ ಕೂಲಿ ಕಾರ್ಮಿಕರ ಮಕ್ಕಳು ಒಳಗೊಂಡಂತೆ 65 ಮಕ್ಕಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದುವರೆಗೂ ಯಾವುದೇ ದುರಸ್ತಿ ಕಾರ್ಯ ಕಾಣದ ಕೊಠಡಿಗಳು ಅಗತ್ಯವಾಗಿ ನವೀಕರಣಗೊಳ್ಳಬೇಕಿದೆ. ಛಾವಣಿಯು ಸೋರುತ್ತಿದ್ದು, ಮಳೆಗಾಲದಲ್ಲಿ ವಿದ್ಯಾರ್ಥಿಗಳ ಸಂಕಷ್ಟ ಹೇಳತಿರದು. ಗ್ರಾ.ಪಂ. ಮತ್ತು ಜಿ.ಪಂ ಅನುದಾನದಲ್ಲಿ ಎರಡು ಕೊಠಡಿಗಳನ್ನು ಮಾತ್ರ ದುರಸ್ತಿ ಮಾಡಲಾಗಿದ್ದು, ಉಳಿದವು ನವೀಕರಣಗೊಳ್ಳದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಿದಾಗ ಕಾರ್ಯದರ್ಶಿ ಪರಮೇಶ್ವರ್ ಸಂಬಂಧಪಟ್ಟ ಇಲಾಖೆಯೊಂದಿಗೆ ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಶಾಲೆಯ ಮುಖ್ಯಶಿಕ್ಷಕರಾದ ರಾಜಣ್ಣ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರೀಶ್ ಗ್ರಾಮಸ್ಥರಾದ ಚೌಡಪ್ಪ ರಾಹುಲ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net