ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ

ಸೋಮವಾರಪೇಟೆಯ ವಿಶ್ವಕರ್ಮ ಸಮಾಜದ ವತಿಯಿಂದ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆದ ವಿಶ್ವಕರ್ಮ ಜಯಂತಿ ಹಾಗೂ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡಿದ್ದರು. ಲೀಲಾರಾಂ, ಅಜಯ್ ಇದ್ದರು.
ಸೋಮವಾರಪೇಟೆಯ ವಿಶ್ವಕರ್ಮ ಸಮಾಜದ ವತಿಯಿಂದ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆದ ವಿಶ್ವಕರ್ಮ ಜಯಂತಿ ಹಾಗೂ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡಿದ್ದರು. ಲೀಲಾರಾಂ, ಅಜಯ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಮಂತರ್‌ಗೌಡ ಅಭಿಮತ
ಸೋಮವಾರಪೇಟೆ: ವಿಶ್ವಕರ್ಮರು ಇಡೀ ಜಗತ್ತಿನ ಸೃಷ್ಟಿಶಕ್ತಿಯ ಪ್ರತೀಕವಾಗಿರುವುದರಿಂದ ಎಲ್ಲರೂ ಅವರನ್ನು ಗೌರವಿಸಬೇಕೆಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.
ಇಲ್ಲಿನ ವಿಶ್ವಕರ್ಮ ಸಮಾಜದ ವತಿಯಿಂದ ಪಟ್ಟಣದ ಮಹಿಳಾ ಸಮಾಜದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಯಕದ ಗೌರವ, ಕೌಶಲದ ಮಹತ್ವ, ಸೃಜನಶೀಲತೆ ಹಾಗೂ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆಯನ್ನು ನಾವು ಗೌರವಿಸಬೇಕೆಂದರು.
ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮುದಾಯದಲ್ಲಿ ಜ್ಞಾನ ಮತ್ತು ಪ್ರತಿಭೆಯನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದರು.
ಸಮಾಜದ ಹಿರಿಯರಾದ ಎಸ್. ಬಿ. ಲೀಲಾರಾಮ್, ತಾಲೂಕು ಘಟಕದ ಅಧ್ಯಕ್ಷರಾದ ಅಜಯ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net