ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಯಾವುದೇ ಸಮಸ್ಯೆ ಎದುರಾಗದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು. ಗ್ರಾಮೀಣ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪಿಡಿಒಗಳು ನೋಡಿಕೊಳ್ಳಬೇಕು ಎಂದು ಹೇಳಿದರು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಯಾವುದೇ ಹಳ್ಳಿ ಜನರು ಕುಡಿವ ನೀರಿಗಾಗಿ ಪರದಾಡಬಾರದು ಎಂದು ಮಂತರ್‌ಗೌಡ ಎಂದು ಸೂಚಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅಬ್ದುಲ್‌ನಬಿ, ತಹಸೀಲ್ದಾರ್ ಕೃಷ್ಣಮೂರ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಇದ್ದರು.