100 ಕುಟುಂಬಗಳಿಗೆ ಐನೂರು ಲೀಟರ್ ಸಾಮರ್ಥ್ಯದ ನೀರು ಸಂಗ್ರಹ ಡ್ರಮ್
ಸೋಮವಾರಪೇಟೆ: ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶೇ, 25 ರ ನಿಧಿಯಡಿ ವಾರ್ಡ್ ಸಂಖ್ಯೆ 2 ಮತ್ತು 3ರ ಸುಮಾರು 100 ಕುಟುಂಬಗಳಿಗೆ ಐನೂರು ಲೀಟರ್ ಸಾಮರ್ಥ್ಯದ ನೀರು ಸಂಗ್ರಹ ಡ್ರಮ್ ನೀಡಲಾಯಿತು.
ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ಗೀತಾ, ಉಪಾಧ್ಯಕ್ಷ ನತೀಶ್ ಮಂದಣ್ಣ, ಮಾಜಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸದಸ್ಯರಾದ ಪ್ರವೀಣ್, ಜ್ಯೋತಿ ನೆಹರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಕುಮಾರ್ ಹಾಗೂ ಸಿಬ್ಬಂದಿ ಇದ್ದರು.