ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ: ಕಾಳೇಗೌಡ

ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಕಾಳೇಗೌಡ ಅವರು ತಪಾಸಣೆ ನಡೆಸಿದರು.
ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಕಾಳೇಗೌಡ ಅವರು ತಪಾಸಣೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ: ಕಾಳೇಗೌಡ
ಗೋಣಿಕೊಪ್ಪ: ನಮ್ಮನ್ನು ನಂಬಿ ಬದುಕುತ್ತಿರುವ ಕುಟುಂಬ ಸದಸ್ಯರ ಸುರಕ್ಷತೆಯನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಎಂದು ಗೋಣಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಾಳೇಗೌಡ ಸಲಹೆ ನೀಡಿದರು.
ಗೋಣಿಕೊಪ್ಪ ಪಟ್ಟಣದ ವಿವಿಧ ಭಾಗಗಳಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಸವಾರರ ವಿರುದ್ಧ ವಿಶೇಷ ತಪಾಸಣೆ ನಡೆಸಿದ ಅವರು, ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ನಿಯಮ ಉಲ್ಲಂಘಿಸುವುದರಿಂದ ಆಗುವ ಅಪಾಯಗಳು ಹಾಗೂ ಕುಟುಂಬದವರ ಜವಾಬ್ದಾರಿಯನ್ನು ಮನಗಾಣುವಂತೆ ಚಾಲಕರಿಗೆ ತಿಳಿಸಿದರು.
ಕಾರು ಹಾಗೂ ಜೀಪು ಚಾಲಕರು ಕಡ್ಡಾಯವಾಗಿ ಸೀಟ್‌ಬೆಲ್ಟ್ ಧರಿಸಬೇಕು. ಚಾಲಕರು ಚಾಲನಾ ಪರವಾನಗಿ ಸೇರಿದಂತೆ ವಾಹನದ ಎಲ್ಲ ಅಗತ್ಯ ದಾಖಲೆಗಳನ್ನು ಹೊಂದಿರುವುದು ಅತ್ಯವಶ್ಯ ಎಂದು ತಿಳಿಸಿದರು.
ಬಸ್ ಚಾಲಕರೂ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ, ರಸ್ತೆ ದಟ್ಟಣೆಗೆ ಕಾರಣವಾಗದ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಬಸ್ ನಿಲ್ದಾಣಗಳಲ್ಲಿ ವಾಹನ ನಿಲ್ಲಿಸಿ, ಸಂಚಾರ ಶಿಸ್ತು ಹಾಗೂ ಸಮಯಪಾಲನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಈ ವೇಳೆ ಅಪರಾಧ ವಿಭಾಗದ ಉಪನಿರೀಕ್ಷಕ ವೆಂಕಟೇಶ್ ಹಾಗೂ ಗೋಣಿಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net