

ಪ್ರಮುಖ ಮುಖ್ಯಾಂಶಗಳು
ವಿ. ಬಾಡಗ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯಸಭಾ ಸದಸ್ಯರಿಂದ ಅನುದಾನ ದೊರೆಯುತ್ತದೆ. ವೈಯಕ್ತಿಕವಾಗಿ ಹಣ ನೀಡಿದ್ದೇನೆ. ಇಲ್ಲಿ ವಸತಿ ನಿಲಯ ನಿರ್ಮಿಸಲಾಗುವುದು. ಕಾಮಗಾರಿ ಪೂರ್ಣಗೊಳಿಸಲು 3 ವರ್ಷ ಸಮಯ ಬೇಕಾಗಿದೆ. ಹಂತಹAತವಾಗಿ ನಿರ್ಮಾಣ ಕಾರ್ಯ ನಡೆಯಲಿದೆ. ಮುಖ್ಯಮಂತ್ರಿ ಜತೆ ಈ ವಿಚಾರವಾಗಿ ಚರ್ಚಿಸಲಾಗಿದೆ. ಅನುದಾನ ನೀಡಲು ಬೇಡಿಕೆ ಸಲ್ಲಿಸಿದ್ದೇನೆ. ಕೇಂದ್ರದ ಸಹಾಯವನ್ನೂ ಪಡೆಯಲಾಗುವುದು. ಇದಕ್ಕೆ ಅಜಯ್ ಮಕಾನ್ ನೆರವು ನೀಡಲಿದ್ದಾರೆ.
ಕೊಡಗು ಕ್ರೀಡೆಯ ತವರೂರು. ವಿರಾಜಪೇಟೆ ಎ.ಎಸ್. ಪೊನ್ನಣ್ಣ ಪ್ರಯತ್ನದಿಂದ ವಿ. ಬಾಡಗ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣ ಮತ್ತು ವಿವಿಧ ಕ್ರೀಡೆಗಳ ತರಬೇತಿ ಕೇಂದ್ರವನ್ನು ಮಾದರಿಯಾಗಿ ನಿರ್ಮಿಸುವ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಗಿದೆ. ಇಲ್ಲಿ ಕ್ರೀಡಾಸಂಕೀರ್ಣ ಅಸ್ತಿತ್ವಕ್ಕೆ ಬಂದ ನಂತರ ಜಿಲ್ಲೆಯ ಎಲ್ಲಾ ಬಗೆಯ ಕ್ರೀಡಾಪಟುಗಳ ಪ್ರತಿಭೆ ಬೆಳಕಿಗೆ ತರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.