ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ

ರಸ್ತೆ ಬದಿ ನಿಲ್ಲಿಸಿದ್ದ ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ ಮಾಡಿರುವುದು
ರಸ್ತೆ ಬದಿ ನಿಲ್ಲಿಸಿದ್ದ ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ ಮಾಡಿರುವುದು
Published on
ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಇಂಜಿಲಗೆರೆ ಸ್ಕೂಲ್ ಎಸ್ಟೇಟ್‌ನಲ್ಲಿ ಶುಕ್ರವಾರ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ ನಡೆಸಿ ಹಾನಿಗೊಳಿಸಿದೆ.
ಕಾರ್ಮಿಕರನ್ನು ತೋಟದ ಕೆಲಸಕ್ಕೆ ಕರೆದೊಯ್ದಿದ್ದ ಚಾಲಕ ಬಾಲಕೃಷ್ಣ ಆಟೋ ರಿಕ್ಷಾವನ್ನು ತೋಟದೊಳಗಿನ ರಸ್ತೆ ಬದಿ ನಿಲ್ಲಿಸಿದ್ದರು. ಬಳಿಕ ಕಾರ್ಮಿಕರು ತೋಟದೊಳಗೆ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾಡಾನೆ ರಿಕ್ಷಾ ಮೇಲೆ ದಾಳಿ ನಡೆಸಿದೆ. ಕಾರ್ಮಿಕರು ವಾಹನದಿಂದ ದೂರದಲ್ಲಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಘಟನಾ ಸ್ಥಳಕ್ಕೆ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಈ ಪೈಕಿ ಎರಡು ಆನೆಗಳನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರದ ಕ್ರಾಲ್‌ನಲ್ಲಿ ನುರಿತ ಕಾವಾಡಿಗರಿಂದ ಪಳಗಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಇನ್ನೂ ಒಂದು ಪುಂಡಾನೆಯನ್ನು ಸೆರೆಹಿಡಿಯಬೇಕಿದ್ದು, ಆನೆಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ನಡೆಸಿ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದರು. ಉಪ ವಲಯ ಅರಣ್ಯಾಧಿಕಾರಿ ಮನೋಜ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net