ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಪದೇ ಪದೆ ಪಟ್ಟಣದತ್ತ ಬರುತ್ತಿರುವುದರಿಂದ ಜನರು ಆತಂಕದಿಂದ ಜೀವನ ನಡೆಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ತಕ್ಷಣ ಕಾರ್ಯಾಚರಣೆ ನಡೆಸಿ ಅವುಗಳನ್ನು ಕಾಡಿಗೆ ಅಟ್ಟುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ