ವನ್ಯಪ್ರಾಣಿ ದಾಳಿ ಪರಿಹಾರ ಮೊತ್ತ ಇನ್ನಷ್ಟು ಹೆಚ್ಚಳವಾಗಲಿ

ಆಲ್ ಇಂಡಿಯಾ ದಲಿತ್ ರೈಟ್ಸ್ ಮೂವ್ಮೆಂಟ್ ಮತ್ತು ಭಾರತ ಕಮ್ಯುನಿಸ್ಟ್ ಪಕ್ಷದಿಂದ ತಿತಿಮತಿಯ ಆನೆಚೌಕೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಯಿತು.
ಆಲ್ ಇಂಡಿಯಾ ದಲಿತ್ ರೈಟ್ಸ್ ಮೂವ್ಮೆಂಟ್ ಮತ್ತು ಭಾರತ ಕಮ್ಯುನಿಸ್ಟ್ ಪಕ್ಷದಿಂದ ತಿತಿಮತಿಯ ಆನೆಚೌಕೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ವನ್ಯಪ್ರಾಣಿ ದಾಳಿ ಪರಿಹಾರ ಮೊತ್ತ ಇನ್ನಷ್ಟು ಹೆಚ್ಚಿಸುವುದು
  • ತಿತಿಮತಿಯ ಆನೆಚೌಕೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ
ಪೊನ್ನಂಪೇಟೆ: ವನ್ಯಪ್ರಾಣಿ ದಾಳಿ ಪರಿಹಾರ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಿತಿಮತಿಯ ಆನೆಚೌಕೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಇತ್ತೀಚೆಗೆ ಆಲ್ ಇಂಡಿಯಾ ದಲಿತ್ ರೈಟ್ಸ್ ಮೂವ್ಮೆಂಟ್ ಮತ್ತು ಭಾರತ್ ಕಮ್ಯುನಿಸ್ಟ್ ಪಕ್ಷದಿಂದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಯಿತು.
ಭಾರತ್ ಕಮ್ಯುನಿಸ್ಟ್ ಪಕ್ಷದ ನಿಕಟಪೂರ್ವ ಕಾರ್ಯದರ್ಶಿ ಕೆ.ವಿ.ಸುನಿಲ್ ಮಾತನಾಡಿ, ಹಲವಾರು ವರ್ಷಗಳಿಂದ ಆನೆ ಮತ್ತು ಮಾನವ ಸಂಘರ್ಷದ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಅರಣ್ಯ ಇಲಾಖೆ ವನ್ಯಪ್ರಾಣಿಗಳ ಹಾವಳಿ ತಡೆಗಟ್ಟುವಲ್ಲಿ ವಿಫಲವಾಗಿದೆ. ಅಲ್ಲದೆ ವೈಲ್ಡ್ಲೈಫ್ ಆಕ್ಟ್ ಕೇಂದ್ರ ಸರ್ಕಾರದ ಕಾನೂನಾಗಿದ್ದು, ಜಿಲ್ಲೆಯ ಸಂಸದರು, ಸ್ಥಳೀಯ ಶಾಸಕರು, ಎಂಎಲ್ಸಿಗಳು ಘಟನೆಗೆ ಹೊಣೆಗಾರರಾಗಲಿದ್ದಾರೆ ಎಂದು ಆರೋಪಿಸಿದರು.
ಹಲವು ವರ್ಷಗಳಿಂದ ಶಾಶ್ವತ ಪರಿಹಾರಕ್ಕಾಗಿ ಹೋರಾಟ ನಡೆಯುತ್ತಿದೆ. ಜಿಲ್ಲೆಯನ್ನು ಪ್ರತಿನಿಧಿಸುವ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ವನ್ಯಪ್ರಾಣಿ ದಾಳಿ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸುತ್ತಿದ್ದರು. ಇದೀಗ ಅವರನ್ನು ಕಡೆಗಣಿಸಲಾಗಿದೆ. ಕೂಡಲೇ ಶಾಶ್ವತ ಪರಿಹಾರವನ್ನು ರೂಪಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆರ್‌ಎಫ್‌ಒ ದೇವರಾಜು ಅವರಿಗೆ ಮನವಿ ಪತ್ರ ನೀಡಲಾಯಿತು. ಆಲ್ ಇಂಡಿಯಾ ದಲಿತ ರೈಟ್ಸ್ ಮೂವ್‌ಮೆಂಟ್‌ನ ರಾಜ್ಯಉಪಾಧ್ಯಕ್ಷ ರಮೇಶ್ ಮಾಯಮುಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ಥಳೀಯ ಕಮ್ಯುನಿಸ್ಟ್ ಮುಖಂಡ ಜೆ.ಕೆ.ತಿಮ್ಮ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net